ಅಲ್ಲದೇ ವಾರ್ಷಿಕೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಆಸ್ಪತ್ರೆಗಳಾದ ಕೆ.ಎಂ.ಸಿ ಆಸ್ಪತ್ರೆ, ಎಜೆ ಆಸ್ಪತ್ರೆ & ರಿಸರ್ಚ್ ಸೆಂಟರ್, ಯೆನಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ದೇರಳಕಟ್ಟೆ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು, ಕೆ.ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ಇದರ ಸಹಭಾಗಿತ್ವದಲ್ಲಿ ಜಿಲ್ಲೆಯ ಇತಿಹಾಸದಲ್ಲಿ ಪ್ರಥಮ ಬಾರಿಗೆ ಸುಮಾರು 1000 ಯೂನಿಟ್‌ಗಳಷ್ಟು ರಕ್ತದಾನ ಸಂಗ್ರಹ ಮಾಡುತ್ತಿದ್ದೇವೆ ಎಂದರು. ಇದರೊಂದಿಗೆ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣೆ ಮತ್ತು ಬಡ ನಿರ್ಗತಿಕ ಕುಟುಂಬಗಳಿಗೆ ಆರೋಗ್ಯ ಕಾರ್ಡ್ ವಿತರಣೆ ಮಾಡುತ್ತಿದ್ದೇವೆ ಅಂದರು. ಇನ್ನು ಅತಿಥಿಗಳಾಗಿ ಮಾಜಿ ಸಚಿವ ಬಿ.ರಮಾನಾಥ ರೈ, ಮಿಥುನ್ ರೈ, ಇನಾಯತ್ ಅಲಿ, ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸುತ್ತಾರೆ ಅಂದರು.
ಇದೇ ವೇಳೆ ಮಾತನಾಡಿದ ಟ್ರಸ್ಟ್ ನ ಸಲಹಾ ಸಮಿತಿ ಸದಸ್ಯ ಹನೀಫ್ ಖಾನ್ ಕೊಡಾಜೆ, ಪುದು ಗ್ರಾಮ ವ್ಯಾಪ್ತಿಯ ಸುಮಾರು 11 ಮಸೀದಿಗೆ ಒಳಪಟ್ಟಿರುವ ಕೆಲವು ಯುವಕರುಗಳನ್ನು ಸೇರಿಸಿಕೊಂಡು 10 ಜೂನ್ 2012 ರಂದು ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ ಫರಂಗಿಪೇಟೆ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿಕೊಂಡು ಈ ವ್ಯಾಪ್ತಿಗೆ ಸಂಬಂಧಪಟ್ಟ ಸಾಮಾಜಿಕ ಶೈಕ್ಷಣಿಕ, ಆರೋಗ್ಯ ಮತ್ತು ಮೂಲಭೂತ ಸೌಕರ್ಯಗಳಿಗೆ ಆದ್ಯತೆಯನ್ನು ನೀಡಿಕೊಂಡು ಬಡ ಮತ್ತು ನಿರ್ಗತಿಕರ ಸೇವೆಯನ್ನು ಮಾಡಿಕೊಂಡು ಬಂದಿದೆ ಅಂದರು. ಸುದ್ದಿಗೋಷ್ಟಿಯಲ್ಲಿ ಕಾರ್ಯಕ್ರಮದ ಸಂಚಾಲಕ ಸಲೀಂ ಅಲ್ತಾಫ್ ಡೈಮಂಡ್, ಸಲಹಾ ಸಮಿತಿಯ ಸದಸ್ಯರಾದ ಶಬೀರ್ ಕೆಂಪಿ ಉಪ್ಪಿನಂಗಡಿ, ಮುಸ್ತಫಾ ಮೇಲ್ಮನೆ ಫರಂಗಿಪೇಟೆ, ಇಝ್ಝಾ ಬಜಾಲ್ ಹಾಗೂ ಪ್ರಧಾನ ಕಾರ್ಯದರ್ಶಿ ಹಾಶೀರ್ ಪೇರಿಮಾರ್ ಉಪಸ್ಥಿತರಿದ್ದರು.

