Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಫೆಬ್ರವರಿ 16 ರಿಂದ 29 ರ ವರೆಗೆ ಜರಗಲಿರುವ "ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ" ಹಾಗೂ "ವಾರ್ಷಿಕ ಜಾತ್ರಾ ಮಹೋತ್ಸವದ" ಆಮಂತ್ರಣ ಪತ್ರಿಕೆ ಬಿಡುಗಡೆ.

ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಫೆಬ್ರವರಿ 16 ರಿಂದ 29 ರ ವರೆಗೆ ಜರಗಲಿರುವ "ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ" ಹಾಗೂ "ವಾರ್ಷಿಕ ಜಾತ್ರಾ ಮಹೋತ್ಸವದ" ಆಮಂತ್ರಣ ಪತ್ರಿಕೆ ಬಿಡುಗಡೆ.
ಕುಂಬಳೆ: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಫೆಬ್ರವರಿ 16 ರಿಂದ 29 ರ ವರೆಗೆ ನಡೆಯಲಿರುವ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಇಂದು ಬೆಳಗ್ಗೆ ಕ್ಷೇತ್ರದಲ್ಲಿ ನಡೆಯಿತು.
ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹಾಗೂ ಮಾಣಿಲ ಶ್ರೀ ಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ
ದೀಪ ಬೆಳಗಿಸಿ, ಉದ್ಘಾಟಿಸಿ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ, ಶುಭಾಶೀರ್ವಚನವಿತ್ತರು. ಬೆಳ್ಳಿಯ ಕಲಶ ಹಾಗೂ ತಾಮ್ರದ ಕಲಶದ ಕೂಪನ್ ನ್ನು ಕ್ಷೇತ್ರದ ತಂತ್ರಿಗಳಾದ ದೇಲಂಪಾಡಿ ಗಣೇಶ್ ತಂತ್ರಿಗಳು ತಮ್ಮ ದಿವ್ಯ ಹಸ್ತದಿಂದ ಬಿಡುಗಡೆಗೊಳಿಸಿ,
ಕುಂಬಳೆಯ ಹಿರಿಯ ವ್ಯಾಪಾರಿ ನರಸಿಂಹ ನಾಯಕ್ ಗುರುವಾಯನಕೆರೆ ಹಾಗೂ
ಜೀವವಿಮಾ ನಿಗಮದ ನಿವೃತ್ತ ಆಫೀಸರ್ ರಾಮಕೃಷ್ಣ ಶೇಡಿಕಾವ್ ರಿಗೆ ಮೊದಲ ಕೂಪನ್ ನೀಡಿ ಚಾಲನೆಗೊಳಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ರಘುನಾಥ ಪೈ ಕುಂಬಳೆ ವಹಿಸಿದ್ದರು. ವೇದಿಕೆಯಲ್ಲಿ ಮಾಯಿಪ್ಪಾಡಿ ಅರಮನೆಯ ಪ್ರತಿನಿಧಿ ಶ್ರೀ ಚಂದ್ರ ಮೋಹನ್ ರಾಜ್, ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ: ಸುನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದು, ಶುಭಾಶಂಸನೆಗೈದರು. ಬ್ರಹ್ಮಕಲಶೋತ್ಸವದ ಸ್ಮರಣ ಸಂಚಿಕೆ ಹಾಗೂ ಸಾಂಸ್ಕೃತಿಕ ಸಮಿತಿಯ ಪ್ರಧಾನ ಸಂಚಾಲಕ ಶಂನಾಡಿಗ ಕುಂಬಳೆ ಸ್ವಾಗತಿಸಿ, ಮಹಿಳಾ ಸಮಿತಿ ಮತ್ತು ಸ್ಮರಣ ಸಂಚಿಕೆ ಸಮಿತಿ ಸಹ ಸಂಚಾಲಕಿ: ಶ್ರೀಮತಿ ವಿಜಯಲಕ್ಷ್ಮೀ ಶಂನಾಡಿಗ ನಿರೂಪಿಸಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ದಾಮೋದರ ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.