Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ನಟಿ ಲೀಲಾವತಿ ನಿಧನ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲಾವಿದೆ ಇನ್ನಿಲ್ಲ.

ನಟಿ ಲೀಲಾವತಿ ನಿಧನ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲಾವಿದೆ ಇನ್ನಿಲ್ಲ.
ಬೆಂಗಳೂರು: ಸ್ಯಾಂಡಲ್ವುಡ್ನ ಹಿರಿಯ ನಟಿ ಲೀಲಾವತಿ ನಿಧನರಾಗಿದ್ದಾರೆ. ಪುತ್ರ ವಿನೋದ್ ರಾಜ್ ಜೊತೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಅವರು ವಾಸವಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು 87ನೇ ವಯಸ್ಸಿನಲ್ಲಿ ಕೊನೆಯುಸಿರು ಎಳೆದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ. ಕಳೆದ ಕೆಲವು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಇಂದು (ಡಿಸೆಂಬರ್ 8) ನಿಧನರಾಗಿದ್ದಾರೆ. 50 ವರ್ಷಗಳ ಕಾಲ ಚಿತ್ರರಂಗಕ್ಕೆ ಲೀಲಾವತಿ ಸೇವೆ ಸಲ್ಲಿಸಿದ್ದರು. ಅವರಿಗೆ 86 ವರ್ಷ ವಯಸ್ಸಾಗಿತ್ತು. ರಾಜ್ಕುಮಾರ್, ವಿಷ್ಣುವರ್ಧನ್ ಮುಂತಾದ ನಟರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು. 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಪಾರ ಖ್ಯಾತಿ ಗಳಿಸಿದ್ದ ಲೀಲಾವತಿ ನಿಧನಕ್ಕೆ ಅಭಿಮಾನಿಗಳು, ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ. ನಟನೆ ಮಾತ್ರವಲ್ಲದೇ ಸಾಮಾಜಿಕ ಕೆಲಸಗಳ ಮೂಲಕವೂ ಲೀಲಾವತಿ ಗುರುತಿಸಿಕೊಂಡಿದ್ದರು. ಪುತ್ರ ವಿನೋದ್ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ. ನಟಿ ಲೀಲಾವತಿ ಅವರು ನೆಲಮಂಗಲದ ಸೋಲದೇವನಹಳ್ಳಿ ಬಳಿ ಪುತ್ರ ವಿನೋದ್ ರಾಜ್ ಜೊತೆ ವಾಸವಾಗಿದ್ದರು. ಸಿನಿಮಾದಿಂದ ದೂರ ಉಳಿದುಕೊಂಡಿದ್ದ ಅವರು ಕೃಷಿ ಕೆಲಸದಲ್ಲಿ ತೊಡಗಿಕೊಂಡಿದ್ದರು. ವಿನೋದ್ ರಾಜ್ ಕೂಡ ಕೃಷಿ ಕೆಲಸ ಮಾಡುತ್ತಿದ್ದಾರೆ. ಲೀಲಾವತಿ ಅವರ ಅನಾರೋಗ್ಯದ ವಿಷಯ ತಿಳಿದ ಬಳಿಕ ಕನ್ನಡ ಚಿತ್ರರಂಗದ ಅನೇಕರು ಸೋಲದೇವನಹಳ್ಳಿಗೆ ಬಂದು ಆರೋಗ್ಯ ವಿಚಾರಿಸಿದ್ದರು. ಶಿವರಾಜ್ಕುಮಾರ್, ಗೀತಾ ಶಿವರಾಜ್ಕುಮಾರ್, ದರ್ಶನ್, ಅಭಿಷೇಕ್ ಅಂಬರೀಷ್, ಅರ್ಜುನ್ ಸರ್ಜಾ, ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕರು ಬಂದು ವಿನೋದ್ ರಾಜ್ಗೆ ಧೈರ್ಯ ತುಂಬಿದ್ದರು. ಲೀಲಾವತಿ ಅವರು ಇನ್ನೂ ಒಂದಷ್ಟು ವರ್ಷಗಳ ಕಾಲ ಆರೋಗ್ಯಯುತವಾಗಿ ಇರಲಿ ಎಂದು ಎಲ್ಲರೂ ಹಾರೈಸಿದ್ದರು. ಆದರೆ ಯಾರ ಪ್ರಾರ್ಥನೆಯೂ ಫಲಿಸಲಿಲ್ಲ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಅವರು ಕೊನೆಯುಸಿರು ಎಳೆದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಪ್ರಾರ್ಥಿಸುತ್ತಿದ್ದಾರೆ. ಲೀಲಾವತಿ ಅವರು ಚಿತ್ರರಂಗದಿಂದ ದೂರ ಉಳಿದುಕೊಂಡಿದ್ದರೂ ಕೂಡ ಸಿನಿಮಾ ಕಲಾವಿದರ ಬಗ್ಗೆ ಕಾಳಜಿ ಹೊಂದಿದ್ದರು. ಅನೇಕ ಕಲಾವಿದರಿಗೆ ಮಾಸಾಶನ ಸಿಗುವಂತೆ ಮಾಡಿದ್ದರು. ಪ್ರಾಣಿಗಳ ಬಗ್ಗೆ ಅವರಿಗೆ ಅಪಾರ ಪ್ರೀತಿ ಇತ್ತು. ಅದೇ ಕಾರಣಕ್ಕಾಗಿ ಅವರು ಸ್ವಂತ ಹಣದಲ್ಲಿ ಸೋಲದೇವನಹಳ್ಳಿ ಬಳಿ ಪಶು ಆಸ್ಪತ್ರೆ ನಿರ್ಮಿಸಿದ್ದರು. ಆ ಆಸ್ಪತ್ರೆ ಉದ್ಘಾಟನೆ ಆದ ಕೆಲವೇ ದಿನಗಳ ಬಳಿಕ ಅವರು ಇಹಲೋಕ ತ್ಯಜಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.