Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಮಂಜೇಶ್ವರ, ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಮಂಜೇಶ್ವರ, ವಿವಿಧ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ "1766 ನೇ ಮದ್ಯವರ್ಜನ ಶಿಬಿರ" ಬಂಗ್ರ ಮಂಜೇಶ್ವರ ಶ್ರೀ ವೀರಭದ್ರ ಮಹಾಮ್ಮಾಯೀ ದೇವಸ್ಥಾನದ ಸಭಾಂಗಣದಲ್ಲಿ ಉದ್ಘಾಟನೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಮಂಜೇಶ್ವರ, ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಮಂಜೇಶ್ವರ, ವಿವಿಧ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ "1766 ನೇ ಮದ್ಯವರ್ಜನ ಶಿಬಿರ" ಬಂಗ್ರ ಮಂಜೇಶ್ವರ ಶ್ರೀ ವೀರಭದ್ರ ಮಹಾಮ್ಮಾಯೀ ದೇವಸ್ಥಾನದ ಸಭಾಂಗಣದಲ್ಲಿ ಉದ್ಘಾಟನೆ.
ಮಂಜೇಶ್ವರ: ದುಡಿಮೆಯ ಬಹುಪಾಲು ಹಣವನ್ನು ಮದ್ಯಪಾನದಂತಹ ದುಶ್ಚಟಗಳಿಗೆ ವಿನಿಯೋಗಿಸಿ ಕುಟುಂಬಗಳು ಆರ್ಥಿಕ ಹಿನ್ನೆಡೆಯತ್ತ ಸಾಗುತ್ತಿವೆ. ಮದ್ಯಪಾನದ ಪಿಡುಗಿನಿಂದ ನಾಶವಾಗುತ್ತಿರುವ ಕುಟುಂಬಗಳನ್ನು ರಕ್ಷಿಸಿ ಆರ್ಥಿಕವಾಗಿ ಮುಂದೆ ತರಲು ಮದ್ಯವರ್ಜನ ಶಿಬಿರವನ್ನು ಮಂಜೇಶ್ವರದಲ್ಲಿ ದ್ವಿತೀಯ ಬಾರಿಗೆ ಹಮ್ಮಿಕೊಂಡಿರುವುದು ಶ್ಲಾಘನೀಯ ಬ್ರಹ್ಮಶ್ರೀ ಬಡಾಜೆ ಬೂಡು ಗೋಪಾಲಕೃಷ್ಣ ತಂತ್ರಿಗಳು ನುಡಿದರು.
ಅವರು ನಿನ್ನೆ ಹೊಸಂಗಡಿ ಬಳಿಯ ಬಂಗ್ರ ಮಂಜೇಶ್ವರ ಶ್ರೀ ವೀರಭದ್ರ ಮಹಾಮ್ಮಾಯೀ ದೇವಸ್ಥಾನದ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಮಂಜೇಶ್ವರ ತಾಲೂಕು ಕಾಸರಗೋಡು ಜಿಲ್ಲೆ ಹಾಗೂ ಕಾಸರಗೋಡು ಜಿಲ್ಲಾ ಜನಜಾಗೃತಿ ವೇದಿಕೆ, ಮದ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಮಂಜೇಶ್ವರ ಮತ್ತು ವಿವಿಧ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ "1766 ನೇ ಮದ್ಯವರ್ಜನ ಶಿಬಿರ" ವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಮಾತನಾಡಿದರು.
ಮದ್ಯಪಾನ ಎಂಬುವುದು ತನ್ನನ್ನು ಹಾಳು ಮಾಡುವುದಲ್ಲದೆ ಜೊತೆಗೆ ಇಡೀ ಕುಟುಂಬದ ಸುಖ ನೆಮ್ಮದಿ ಹಾಳು ಮಾಡುತ್ತದೆ. ಆದ್ದರಿಂದ ಎಲ್ಲಾ ದುಶ್ಚಟಗಳಿಂದ ದೂರ ಉಳಿದರೆ ಮಾತ್ರ ನೆಮ್ಮದಿ ಬದುಕು ಸಾಧ್ಯ. ದುಶ್ಚಟಗಳಿಂದ ಮನುಷ್ಯ ತನ್ನ ಭವಿಷ್ಯವನ್ನು ಕಳೆದುಕೊಳ್ಳುತ್ತಿದ್ದು, ಸಮಾಜದಲ್ಲಿ ತನ್ನ ವ್ಯಕ್ತಿತ್ವ ಕಳೆದುಕೊಳ್ಳುತ್ತಾನೆ. ಯುವಕರು ಇಂದು ದುಶ್ಚಟಗಳ ದಾಸರಾಗುತ್ತಿರುವುದು ವಿಪರ್ಯಾಸ ಎಂದರು.
ಶ್ರೀ ಧಾಮ ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಗಳು ಆಶೀರ್ವಚನವಿತ್ತು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಮಂಜೇಶ್ವರದಲ್ಲಿ ಇದೀಗ ಎರಡನೇ ಬಾರಿ ಮದ್ಯವರ್ಜನ ಶಿಬಿರ ಆಯೋಜಿಸಿರುವುದರಿಂದ ಈ ಭಾಗದ ಬಡ ಜನರಿಗೆ ಮದ್ಯಪಾನ ಬಿಡಿಸುವ ಮೂಲಕ ಅವರ ಬದುಕಿಗೆ ಆಶಾಕಿರಣವಾಗಿದೆ. ಶಿಬಿರದಲ್ಲಿರುವ ಎಲ್ಲಾ ಶಿಬಿರಾರ್ಥಿಗಳು ಇದರಿಂದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಿಬಿರಾರ್ಥಿಗಳಿಗೆ ಕಿವಿಮಾತು ಹೇಳಿದರು. ಈ ಮದ್ಯವರ್ಜನ ಶಿಬಿರ ಏಳು ದಿನಗಳ ಕಾಲ ನಡೆಯಲಿದ್ದು ಇದರಲ್ಲಿ ಶಿಬಿರಾರ್ಥಿಗಳಿಗೆ ಬೋಧನೆ ಜೊತೆಗೆ ಆಟ, ಪಾಠ, ಯೋಗ ಇತ್ಯಾದಿ ಇರುತ್ತದೆ. ಮಾನವನಾದ ಮೇಲೆ ತಪ್ಪು ಮಾಡುವುದು ಸಹಜ, ತಿದ್ದಿ ನಡೆಯುವವನೇ ಮನುಜ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿಬಿರಾಧಿಕಾರಿ ದೇವಿ ಪ್ರಸಾದ್ ಮಾತನಾಡಿ, ಈ ಶಿಬಿರ ಒಂದು ವಾರ ನಡೆಯುತ್ತಿದ್ದು ಶಿಬಿರಾರ್ಥಿಗಳನ್ನು ಅವರ ಸ್ವಂತ ಇಚ್ಛೆಯ ಮೇಲೆ ಅಥವಾ ಅವರ ಕುಟುಂಬದವರ ಒಪ್ಪಿಗೆ ಪಡೆದು ಶಿಬಿರಕ್ಕೆ ಸೇರಿಸಿಕೊಂಡು ಪ್ರತಿ ದಿನ ಬೆಳಗ್ಗೆ 5 ರಿಂದ ರಾತ್ರಿ 10 ಗಂಟೆಯ ತನಕ ಯೋಗ, ಮಾರ್ಗದರ್ಶನ, ವೈದ್ಯರಿಂದ ತಪಾಸಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಗುತ್ತದೆ. ಏಳು ದಿನಗಳ ಕಾಲ ನಡೆಯುವ ಮದ್ಯವರ್ಜನ ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ಊಟದ ವ್ಯವಸ್ಥೆ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಶಿಬಿರದಲ್ಲೇ ಮಾಡಲಾಗಿದೆ. ಶಿಬಿರದಲ್ಲಿ ಮದ್ಯಪಾನದಿಂದಾಗುವ ದುಷ್ಟಪರಿಣಾಮಗಳು ಹಾಗೂ ಮದ್ಯಪಾನ ಬಿಡಲು ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ವಿವರವಾಗಿ ತಿಳಿಸಿ ಮದ್ಯಪಾನ ಬಿಡುವಂತೆ ಮಾಡಲಾಗುವುದು. ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಮದ್ಯವ್ಯಸನಿಗಳು ಸಂಯಮದಿಂದ ಇದ್ದು, ಕಾರ್ಯಕ್ರಮ ಮುಗಿದ ನಂತರ ಮದ್ಯಪಾನ ಬಿಟ್ಟು ಸಂತೋಷವಾಗಿ ಬಾಳಿ ಎಂದು ಹೇಳಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾಸರಗೋಡು ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ವಹಿಸಿದರು. ವೇದಿಕೆಯಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜೀನ್ ಲವೀನಾ ಮೊಂತೇರೋ, ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್ ದೈವಗಳ ಕ್ಷೇತ್ರದ ಅಣ್ಣ ದೈವದ ಪಾತ್ರಿಗಳಾದ ಶ್ರೀ ರಾಜ ಬೆಲ್ಚಪ್ಪಾಡ, ಜನಜಾಗೃತಿ ವೇದಿಕೆ ಕಾಸರಗೋಡಿನ ಸ್ಥಾಪಕಾಧ್ಯಕ್ಷರಾದ ಗೋಪಾಲ ಶೆಟ್ಟಿ ಅರಿಬೈಲ್, ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್, ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿಯ ಗೌರವಾಧ್ಯಕ್ಷರಾದ ಹರಿಶ್ಚಂದ್ರ ಶೆಟ್ಟಿಗಾರ್, ಕಾಸರಗೋಡು ಭಜನಾ ಪರಿಷತ್ತು ಅಧ್ಯಕ್ಷರಾದ ವೆಂಕಟರಮಣ ಹೊಳ್ಳ, ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ಸೇವಾಸಮಿತಿಯ ಅಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಮಂಜೇಶ್ವರ ತಾಲೂಕು ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಉದಯಕುಮಾರ್ ಆನೆಬಾಗಿಲು, ಕಾಸರಗೋಡು ತಾಲೂಕಿನ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಜ್ಞಾನೇಶ್ ಆಚಾರ್ಯ, ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಹರೀಶ್ ಶೆಟ್ಟಿ ಕಡಂಬಾರ್, ಜನ ಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಅಶ್ವಥ್ ಪೂಜಾರಿ ಲಾಲ್ಭಾಗ್, ಜನಜಾಗೃತಿ ವೇದಿಕೆಯ ಸದಸ್ಯರಾದ ಹರೀಶ್ ಶೆಟ್ಟಿ ಮಾಡ, ಕಾರ್ಯಾಧ್ಯಕ್ಷ ಯಾದವ ಬಡಾಜೆ, ಶ್ರೀ ವೀರಭದ್ರ ಮಹಾಮ್ಮಾಯೀ ದೇವಸ್ಥಾನದ ದೈವದ ಪಾತ್ರಿಗಳಾದ ವಾಸುದೇವ ಶೆಟ್ಟಿಗಾರ್ ಕಡಂಬಾರು, ದೇವರಾಜ್, ವಸಂತ ಪೂಜಾರಿ ಉದ್ಯಾವರ, ಯೋಜನಾಧಿಕಾರಿ ಶ್ರೀಮತಿ ಶಶಿಕಲಾ ಸುವರ್ಣ, ಹಿರಿಯರಾದ ಈಶ್ವರ ಮಾಸ್ಟರ್, ಕೋಶಾಧಿಕಾರಿ ರವಿ ಮುಡಿಮಾರ್, ಆರೋಗ್ಯ ಸಹಾಯಕಿ ನೇತ್ರ, ಮೊದಲಾದವರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ಯೋಜನಾಧಿಕಾರಿ ಮುಖೇಶ್ ಗಟ್ಟಿ ಸ್ವಾಗತಿಸಿ, ತಲಪಾಡಿ ವಲಯದ ಮೇಲ್ವಿಚಾರಕರಾದ ಭಾಸ್ಕರ್ ನಿರೂಪಿಸಿ, ಜಿಲ್ಲಾ ಜನ ಜಾಗೃತಿ ವೇದಿಕೆಯ ಸದಸ್ಯರಾದ ಹರೀಶ್ ಶೆಟ್ಟಿ ಮಾಡ ವಂದಿಸಿದರು. ಶಿಬಿರದಲ್ಲಿ ಒಟ್ಟು 70 ಮಂದಿ ಶಿಬಿರಾರ್ಥಿಗಳು ಭಾಗವಹಿಸುತ್ತಿದ್ದು, ಮಂಜೇಶ್ವರ ಹಾಗೂ ಕಾಸರಗೋಡು ತಾಲೂಕಿನ ಯೋಜನಾಧಿಕಾರಿಗಳು, ಜನಜಾಗೃತಿ ವೇದಿಕೆಯ ಸದಸ್ಯರು, ಮೇಲ್ವಿಚಾರಕ ಶ್ರೇಣಿಯ ಸಿಬ್ಬಂದಿಗಳು, ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ನವಜೀವನ ಸಮಿತಿ ಸದಸ್ಯರು, ಶೌರ್ಯ ಘಟಕದ ಪದಾಧಿಕಾರಿಗಳು, ಸದಸ್ಯರು, ಸೇವಾಪ್ರತಿನಿಧಿಗಳು, ಒಕ್ಕೂಟದ ಸದಸ್ಯರು ನೇತೃತ್ವ ನೀಡುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.