ಧರ್ಮಸ್ಥಳ ಡಾ. ವೀರೇಂದ್ರ ಹೆಗ್ಗಡೆ ಯವರಿಗೆ ಹಾಗೂ ಆನೆಗುಂದಿ ಮಹಾ ಸಂಸ್ಥಾನಂನ ಪ.ಪೂ ಜಗದ್ಗುರು ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾ ಸ್ವಾಮಿಗಳವರಿಗೆ ಅಯೋಧ್ಯೆ ಶ್ರೀ ರಾಮ ಮಂದಿರ ಪ್ರತಿಷ್ಠಾ ಕಾರ್ಯಕ್ಕೆ ವಿದ್ಯುಕ್ತ ಆಹ್ವಾನ.
ಜನವರಿ 09, 2024
0
ಧರ್ಮಸ್ಥಳ ಡಾ. ವೀರೇಂದ್ರ ಹೆಗ್ಗಡೆ ಯವರಿಗೆ ಹಾಗೂ ಆನೆಗುಂದಿ ಮಹಾ ಸಂಸ್ಥಾನಂನ ಪ.ಪೂ ಜಗದ್ಗುರು ಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾ ಸ್ವಾಮಿಗಳವರಿಗೆ ಅಯೋಧ್ಯೆ ಶ್ರೀ ರಾಮ ಮಂದಿರ ಪ್ರತಿಷ್ಠಾ ಕಾರ್ಯಕ್ಕೆ ವಿದ್ಯುಕ್ತ ಆಹ್ವಾನ.
ಧರ್ಮಸ್ಥಳ/ಉಡುಪಿ: ಅಯೋಧ್ಯೆಯ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾ ಮಹೋತ್ಸವದ 2024 ಜನವರಿ 22 ರ ಶುಭ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಹಿಸಲು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಪದ್ಮಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರಿಗೆ ಅಯೋಧ್ಯ ಶ್ರೀರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಆಹ್ವಾನವನ್ನು ದ.ಕ ಜಿಲ್ಲಾ ಸಂಘ ಪರಿವಾರದ ವತಿಯಿಂದ ನೀಡಲಾಯಿತು. ಸಹ ಸಂಘ ಚಾಲಕ್ ಸುನಿಲ್ ಆಚಾರ್, ಮಂಗಳೂರು ಜಿಲ್ಲಾ ವಿ.ಎಚ್.ಪಿ ಅಧ್ಯಕ್ಷ ಎಚ್.ಕೆ ಪುರುಷೋತ್ತಮ್, ಉಪಾಧ್ಯಕ್ಷ ಮನೋಹರ್ ಸುವರ್ಣ, ಪುತ್ತೂರು ವಿಭಾಗ ಉಪಾಧ್ಯಕ್ಷ ಡಾ.ಕೃಷ್ಣಪ್ರಸನ್ನ, ಬಜರಂಗದಳ ಜಿಲ್ಲಾ ಸಂಚಾಲಕ ಭರತ್ ಕುಮ್ಡೇಲು, ವಿ.ಎಚ್.ಪಿ ಮಂಗಳೂರು ಕಾರ್ಯದರ್ಶಿ ಶಿವಾನಂದ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು. ಅದೇ ರೀತಿ ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಪ್ರಮುಖರಾದ ದೇವಿ ಪ್ರಸಾದ್ ಶೆಟ್ಟಿ ನೇತೃತ್ವದಲ್ಲಿ ನಿಯೋಗವು ಕಟಪಾಡಿ ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾ ಸಂಸ್ಥಾನ ಸರಸ್ವತಿ ಪೀಠದ ಪ.ಪೂ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾ ಸ್ವಾಮಿಗಳವರನ್ನು ಭೇಟಿ ಮಾಡಿ ವಿದ್ಯುಕ್ತವಾಗಿ ಆಮಂತ್ರಿಸಿದ್ದಾರೆ. ಈ ವೇಳೆ ಭಾಸ್ಕರ ಆಚಾರ್ಯ ಬೆಳುವಾಯಿ, ಆನೆಗುಂದಿ ಪ್ರತಿಷ್ಠಾನದ ಉಪಾಧ್ಯಕ್ಷ ಕಾಡಬೆಟ್ಟು ನಾಗರಾಜ ಆಚಾರ್ಯ ಉಡುಪಿ, ಕಾರ್ಯದರ್ಶಿಗಳಾದ ಕೆ ರಾಘವೇಂದ್ರ ಆಚಾರ್ಯ ಉಡುಪಿ, ಜನಾರ್ದನ ಆಚಾರ್ಯ ಕನ್ಯಾನ, ವಿ.ಹಿಂ.ಪ ಕಳತ್ತೂರು ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.




