Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ. ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ಕೆ ನೆರವು ನೀಡುವ ಬಗ್ಗೆ ಭರವಸೆ.

ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ. ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಕ್ಕೆ ನೆರವು ನೀಡುವ ಬಗ್ಗೆ ಭರವಸೆ.
ಕುಂಬಳೆ: ಸರೋವರ ಕ್ಷೇತ್ರವೆಂದೇ ಖ್ಯಾತಿ ಪಡೆದ ಅನಂತಪುರ ಶ್ರೀ ಅನಂತಪದ್ಮನಾಭ ಕ್ಷೇತ್ರಕ್ಕೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸಂದರ್ಶಿಸಿ ದೇವರ ದರ್ಶನ ಪಡೆದರು. ಈ ಸಂಧರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಚೆಯರ್ ಮೆನ್ ಕುಶಲಪ್ಪ ಕಣ್ಣೂರ್, ಜಯಪ್ರಕಾಶ್ ಶೆಟ್ಟಿ ನಾರಾಯಣಮಂಗಲ, ಪ್ರಸಾದ್ ಕುಮಾರ್ ಕೃಷ್ಣ ನಗರ ಕುಂಬಳೆ, ಸತೀಶ್ ಕುಮಾರ್, ಹರೀಶ್ ಉಪಸ್ಥಿತರಿದ್ದು ಆಡಳಿತ ಮಂಡಳಿಯ ಪರವಾಗಿ ಶಾಲು ಹೊದಿಸಿ ಗೌರವಿಸಿ, ಸ್ವಾಗತಿಸಿದರು, ದೇವಾಲಯದ ಜೀರ್ಣೋದ್ಧಾರ ಕೆಲಸ ಕಾರ್ಯಗಳ ಬಗ್ಗೆ ಅವಲೋಕಿಸಿ, ಮಾಹಿತಿ ಪಡೆದು, ಮುಂದಿನ ಕೆಲಸ ಕಾರ್ಯಗಳಿಗೆ ತಮ್ಮಿಂದಾಗುವ ಸಹಕಾರ ನೀಡುವ ಬಗ್ಗೆ ಭರವಸೆ ನೀಡಿದರು. ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಹಾಲಿಂಗೇಶ್ವರ ಮಾಸ್ಟರ್ ಮಾಹಿತಿ ನೀಡಿದರು, ಮತ್ತು ಈ ಕೆಲಸಕಾರ್ಯಗಳಿಗೆ ಸಹಾಯ ಹಸ್ತ ನೀಡುವಂತೆ ಮನವಿ ಕೂಡಾ ಸಲ್ಲಿಸಿದರು. ಈ ವೇಳೆ ಜೀರ್ಣೋದ್ಧಾರ ಸಮಿತಿ ಸದಸ್ಯರು ಜತೆಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.