Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಮಂಜೇಶ್ವರದಲ್ಲಿ ಪ್ರಪ್ರಥಮ ಬಾರಿಗೆ ನಮೋ ಹೊಸ (ನ್ಯೂ) ಮತದಾರರ ಸಮಾವೇಶ.

ಮಂಜೇಶ್ವರದಲ್ಲಿ ಪ್ರಪ್ರಥಮ ಬಾರಿಗೆ ನಮೋ ಹೊಸ (ನ್ಯೂ) ಮತದಾರರ ಸಮಾವೇಶ.
ಮಂಜೇಶ್ವರ: 2024 ರ ಲೋಕಸಭೆ ಚುನಾವಣೆಯಲ್ಲಿ ಪ್ರಥಮ ಬಾರಿಗೆ ಮತವನ್ನು ಹಾಕುವ ಲಕ್ಷಾಂತರ ಯುವ ಮತದಾರರನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡುವ ಕಾರ್ಯಕ್ರಮ ಇಂದು ಹೊಸಂಗಡಿಯಲ್ಲಿ ನಡೆಯಿತು. ವೀಡಿಯೋ ಕಾನ್ಪರೆನ್ಸ್ ಮೂಲಕ ಸನ್ಮಾನ್ಯ ನರೇಂದ್ರ ಮೋದಿಜೀಯವರು ಯುವ ಮತದಾರರನ್ನು ಉದ್ದೇಶಿ ಮಾತನಾಡಿದರು. ಯುವ ಮೋರ್ಚಾ ಮಂಜೇಶ್ವರ ಮಂಡಲ ಸಮಿತಿಯ ನೇತೃತ್ವದಲ್ಲಿ ಹೊಸಂಗಡಿ ಪ್ರೇರಣಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಅಂಜು ಜೋಸ್ಟಿ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್ ರೈ ಮುಖ್ಯ ಅತಿಥಿ ಭಾಗವಹಿಸಿದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯರಾದ ಹರಿಶ್ಚಂದ್ರ ಮಂಜೇಶ್ವರ, ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯೆ ಶ್ರೀಮತಿ ಅಶ್ವಿನಿ ಎಂ.ಎಲ್, ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷರಾದ ಆದರ್ಶ್ ಬಿ.ಎಂ, ಬಿಜೆಪಿ ಕುಂಬಳೆ ಮಂಡಲ ಅಧ್ಯಕ್ಷರಾದ ಸುನಿಲ್ ಅನಂತಪುರಂ, ಕುಂಬಳೆ ಮಂಡಲ ಕಾರ್ಯದರ್ಶಿ ಧನರಾಜ್ ಪ್ರತಾಪ್ ನಗರ, ಪ್ರದೀಪ್, ಕಿಶೋರ್ ಭಗವತಿ ಕುಂಬಳೆ ಮಂಡಲ ಪ್ರಧಾನ ಕಾರ್ಯದರ್ಶಿ ಕೆ.ಪಿ ಅನಿಲ್ ಕುಮಾರ್, ರವಿರಾಜ್ ಮೊದಲಾದವರು ನೇತೃತ್ವ ವಹಿಸಿದ್ದರು. ಯುವ ಮೋರ್ಚಾ ಕುಂಬಳೆ ಮಂಡಲ ಅಧ್ಯಕ್ಷರಾದ ಅವಿನಾಶ್ ಸ್ವಾಗತಿಸಿ, ಯುವ ಮೋರ್ಚಾ ಮಂಜೇಶ್ವರ ಮಂಡಲದ ಅಧ್ಯಕ್ಷ ರಕ್ಷಣ್ ವಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.