ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸತ್ಯನಾರಾಯಣ ಬೆಳೇರಿಯವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಭಿನಂದನೆ.
ಫೆಬ್ರವರಿ 02, 2024
0
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸತ್ಯನಾರಾಯಣ ಬೆಳೇರಿಯವರಿಗೆ
ಕನ್ನಡ ಸಾಹಿತ್ಯ ಪರಿಷತ್ತಿನಿಂದ ಅಭಿನಂದನೆ.
ಕಾಸರಗೋಡು: ಕೇಂದ್ರ ಸರಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕವಿ, ಭತ್ತದ ತಳಿ ಸಂರಕ್ಷಕ ಸತ್ಯನಾರಾಯಣ ಬೆಳೇರಿ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ವತಿಯಿಂದ ಗೌರವಿಸಲಾಯಿತು. ಕಾಸರಗೋಡು ತಾಳಿಪಡ್ಪಿನ ಉಡುಪಿಗಾರ್ಡನ್ ಸಭಾಂಗಣ'ಮಥುರಾ'ದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಬೆಳೇರಿ ಅವರಿಗೆ ಶಾಲು ಹೊದೆಸಿ ,ಪೇಟ ತೊಡಿಸಿ ಸನ್ಮಾನಿಸಲಾಯಿತು.ಕಾಸರಗೋಡು ಸರಕಾರಿ ಕಾಲೇಜಿನ ಪ್ರಾಧ್ಯಾಪಕ ಡಾ. ರತ್ನಾಕರ ಮಲ್ಲಮೂಲೆ ಅವರು ಅಭಿನಂದನಾ ಭಾಷಣ ಮಾಡಿದರು. ಸಂಘಟನಾ ಕಾರ್ಯದರ್ಶಿ ರಾಮಚಂದ್ರ ಭಟ್ ಧರ್ಮತ್ತಡ್ಕ ಸಂಮಾನ ಪತ್ರ ವಾಚಿಸಿದರು.
ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಗೌರವಾಧ್ಯಕ್ಷ, ಹಿರಿಯ ಸಾಹಿತಿ ಡಾ. ರಮಾನಂದ ಬನಾರಿ ಅವರು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದರು.
ಸಾಹಿತ್ಯ ಪರಿಷತ್ತಿನ ಸಲಹಾ ಸಮಿತಿ ಸದಸ್ಯ ಡಾ .ಮುರಲೀ ಮೋಹನ ಚೂಂತಾರು, ನಿವೃತ್ತ ಜಿಲ್ಲಾ ವಿದ್ಯಾಧಿಕಾರಿ ಎನ್. ಕೆ ಮೋಹನ್ ದಾಸ್, ನ್ಯಾಯವಾದಿ ಐ ವಿ ಭಟ್ ಶುಭ ಹಾರೈಸಿದರು. ಪರಿಷತ್ತಿನ ಪದಾಧಿಕಾರಿಗಳಾದ ಪ್ರದೀಪ್ ಕುಮಾರ್ ಶೆಟ್ಟಿ ಬೇಳ, ನ್ಯಾಯವಾದಿ ಥೋಮಸ್ ಡಿಸೋಜ, ಕವಿತಾ ಕೂಡ್ಲು, ಆಯಿಷಾ ಪೆರ್ಲ ಉಪಸ್ಥಿತರಿದ್ದರು. ಸತ್ಯನಾರಾಯಣ ಬೆಳೇರಿ ಅವರು ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು.
ಗಾಯಕ ಕಿಶೋರ್ ಪೆರ್ಲ ಪ್ರಾರ್ಥನೆ ಹಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ವಂದಿಸಿದರು. ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ಕಾರ್ಯಕ್ರಮ ನಿರೂಪಿಸಿದರು.

