Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಮಂಜೇಶ್ವರದಾಧ್ಯಂತ ಸಂಭ್ರಮದ "ಈದುಲ್ ಫಿತ್ರ್" ಆಚರಣೆ. ವಿವಿದೆಡೆಯ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್, ಅರ್ಹರಿಗೆ ಫಿತರ್ ಝಕಾತ್ ವಿತರಣೆ.

ಮಂಜೇಶ್ವರದಾಧ್ಯಂತ ಸಂಭ್ರಮದ "ಈದುಲ್ ಫಿತ್ರ್" ಆಚರಣೆ.
ಮಂಜೇಶ್ವರ : ಮಂಜೇಶ್ವರ ತಾಲೂಕು ವ್ಯಾಪ್ತಿಯಲ್ಲಿ ಈದುಲ್ ಫಿತ್ರ್ ಅನ್ನು ಇಂದು ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಹೊಸಂಗಡಿ, ಕುಂಜತ್ತೂರು, ಉದ್ಯಾವರ, ಮಂಜೇಶ್ವರ, ವರ್ಕಾಡಿ, ಮೀಂಜ ಪಂಚಾಯತ್ ವ್ಯಾಪ್ತಿಯ ವಿವಿಧ ಮಸೀದಿಗಳಲ್ಲಿ ಉಪ್ಪಳೆಡೆಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಅರ್ಹರಿಗೆ ಫಿತರ್ ಝಕಾತ್ ನೀಡಿದ ಬಳಿಕ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಲಿ ಪ್ರಾರ್ಥನೆ ಸಲ್ಲಿಸಿದರು.
ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಕುಂಜತ್ತೂರು ಮಸ್ಜಿದುನ್ನೂರು ಮಸೀದಿ ಉಸ್ತಾದ್ ನೌಫಲ್ ಒಟ್ಟುಮಾಲ್, ದಾರುಸ್ಸಲಾಂ ಸಲಫಿ ಮಸೀದಿ ಈದ್ಗಾದಲ್ಲಿ ಮೊಹಮ್ಮದಲಿ ಸಲಫಿ, ಉದ್ಯಾವರ ಸಾವಿರ ಜಮಾಹತ್ ಮಸೀದಿಯಲ್ಲಿ ಖತೀಬರಾದ ಅಬ್ದುಲ್ ಕರೀಂ ಧಾರಿಮಿ, ಈದ್ಗಾ ಕಡಂಬಾರಿನಲ್ಲಿ ಉಸ್ತಾದ್ ನೂರುಲ್ ಹಸನ್ ಮದೀನಿ, ಪೊಸೋಟು ಜುಮಾ ಮಸೀದಿಯಲ್ಲಿ ಸಬೀರ್ ಫೈಝಿ ನೇತೃತ್ವದಲ್ಲಿ ಈದ್ ನಮಾಝ್ ಹಾಗೂ ಖುತ್ಬಾ ನಿರ್ವಹಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಗುರುಗಳು ತಮ್ಮ ಈದ್ ಸಂದೇಶದಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತಗಟ್ಟೆಗೆ ತೆರಳಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಿದರು. ಅಲ್ಲದೆ ಎಲ್ಲರೂ ಪರಸ್ಪರ ಸಹೋದರರಂತೆ ಬದುಕಿ ಶಾಂತಿಯ ವಾತಾವರಣ ನಿರ್ಮಿಸುವಂತೆ ಸೌಹಾರ್ದ ಸಂದೇಶ ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.