Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಕೇರಳದ ವಯನಾಡ್ ನಲ್ಲಿ ಭೀಕರ ಭೂಕುಸಿತ, 12 ಕ್ಕೂ ಹೆಚ್ಚು ಮಂದಿ ಬಲಿ.! 100ಕ್ಕೂ ಹೆಚ್ಚು ಮಂದಿ ಕಣ್ಮರೆ.!

ಕೇರಳದಲ್ಲಿ ಭೀಕರ ಭೂಕುಸಿತ, 12 ಕ್ಕೂ ಹೆಚ್ಚು ಮಂದಿ ಬಲಿ.! 100ಕ್ಕೂ ಹೆಚ್ಚು ಮಂದಿ ಕಣ್ಮರೆ.! ಕೇರಳದ ವಯನಾಡ್ ನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 12ಕ್ಕೂ ಹೆಚ್ಚು ಸಾವನ್ನಪ್ಪಿದ್ದಾರೆ.
ವಯನಾಡ್: ಕೇರಳದ ವಯನಾಡ್ ನಲ್ಲಿ ಇಂದು ಮುಂಜಾನೆ ಸಂಭವಿಸಿದ ಭೂಕುಸಿತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 12 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 100 ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿರುವ ಬಗ್ಗೆ ವರದಿ ತಿಳಿಸಿದೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿ ಸಂಭವಿಸಿದ ಗುಡ್ಡ ದುರಂತದಲ್ಲಿ ಇನ್ನೂ ಮೃತ ದೇಹಗಳೇ ಪತ್ತೆ ಆಗಿಲ್ಲ, ಈ ಘಟನೆ ಮಾಸೋ ಮುನ್ನವೇ ಮತ್ತೊಂದು ಭೀಕರ ದುರಂತ ನಡೆದಿದೆ. ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ನಸುಕಿನ ಜಾವ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, 100 ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) , ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಎಲ್ಲಾ ಸರ್ಕಾರಿ ಸಂಸ್ಥೆಗಳು ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್ ನಿಯಂತ್ರಣ ಕೊಠಡಿಯನ್ನು ತೆರೆದಿದೆ ಜೊತೆಗೆ ತುರ್ತು ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 9656938689 ಮತ್ತು 8086010833 ನ್ನು ಬಿಡುಗಡೆ ಮಾಡಲಾಗಿದೆ. ಹೆಲಿಕಾಪ್ಟರ್‌ಗಳನ್ನು ಕೂಡ ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸಂತಾಪ: ಘಟನೆಗೆ ವಯನಾಡ್‌ ಮಾಜಿ ಸಂಸದ ರಾಹುಲ್ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದಾರೆ. ವಯನಾಡಿನ ಮೆಪ್ಪಾಡಿ ಬಳಿ ಸಂಭವಿಸಿದ ಭಾರೀ ಭೂಕುಸಿತದಿಂದ ನಾನು ತೀವ್ರ ನೊಂದಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಘಟನೆಯಲ್ಲಿ ಸಿಲುಕಿಕೊಂಡವರನ್ನು ಶೀಘ್ರದಲ್ಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ನಾನು ಕೇರಳ ಮುಖ್ಯಮಂತ್ರಿ ಮತ್ತು ವಯನಾಡ್ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ನನಗೆ ಭರವಸೆ ನೀಡಿದ್ದಾರೆ. ಎಲ್ಲಾ ಏಜೆನ್ಸಿಗಳೊಂದಿಗೆ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು, ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲು ಮತ್ತು ಪರಿಹಾರ ಪ್ರಯತ್ನಗಳಿಗೆ ಅಗತ್ಯವಿರುವ ಯಾವುದೇ ಸಹಾಯವನ್ನು ನಮಗೆ ತಿಳಿಸಲು ನಾನು ಅವರಿಗೆ ವಿನಂತಿಸಿದ್ದೇನೆ. ನಾನು ಕೇಂದ್ರ ಸಚಿವರೊಂದಿಗೆ ಮಾತನಾಡಿ ವಯನಾಡಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಮನವಿ ಮಾಡುತ್ತೇನೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಆಡಳಿತಕ್ಕೆ ಸಹಾಯ ಮಾಡುವಂತೆ ನಾನು ಎಲ್ಲಾ ಯುಡಿಎಫ್ ಕಾರ್ಯಕರ್ತರನ್ನು ಕೋರುತ್ತೇನೆ ಎಂದು ಎಕ್ಸ್‌ ನಲ್ಲಿ ಬರೆದುಕೊಂಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.