Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ 2024 ರ "ದತ್ತಿ ನಿಧಿ" ಪ್ರಕಟ.

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ 2024ರ "ದತ್ತಿ ನಿಧಿ" ಪ್ರಕಟ.
ಬೆಂಗಳೂರು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಮತ್ತು ಕೆಯುಡಬ್ಲ್ಯುಜೆ ಕಾಸರಗೋಡು ಜಿಲ್ಲಾ ಘಟಕ ನೀಡುವ 2024 ನೇ ಸಾಲಿನ ದತ್ತಿನಿಧಿ ಪ್ರಶಸ್ತಿ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಇಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು ದತ್ತಿ ನಿಧಿ ಘೋಷಿಸಿದರು. 14 ಹಿರಿಯ ಖ್ಯಾತ ಪತ್ರ ಕರ್ತರಿಗೆ ದತ್ತಿ ನಿಧಿ ಘೋಷಿಸಿದೆ. ಜುಲೈ 13ರಂದು ಕಾಸರಗೋಡು ಸೀತಾಂಗೋಳಿಯ ಆಲಯನ್ಸ್ ಕನ್ವೆನ್ಶನ್ ಸೆಂಟರ್‌ನಲ್ಲಿ ನಡೆಯುವ ಕಾರ್ಯಕ್ರಮದೊ 14 ಮಂದಿಗೆ ಕೆಯುಡಬ್ಲ್ಯುಜೆ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕರ್ನಾಟಕ ರಾಜ್ಯ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್, ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಿಧಾನ ಪರಿಷತ್‌ನ ಉಪಸಭಾಪತಿ ಎಂ.ಕೆ. ಪ್ರಾಣೇಶ್, ಎಡನೀರು ಮಠಾದೀಶ ಶ್ರೀ ಶ್ರೀಸಚ್ಚಿದಾನಂದ ಭಾರತಿ ಸ್ವಾಮೀಜಿ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿಮರದ, ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಮತ್ತಿತತರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಖ್ಯಾತ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೆ ಬೃಹೈಕ್ಯ ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಸ್ಮರಣಾರ್ಥ ಶ್ರೀ ಮಠವು ನೀಡುವ ದತ್ತಿನಿಧಿ ಪ್ರಶಸ್ತಿ, ಚೇತನಾ ಬೆಳಗೆರೆಗೆ ಅವ್ವಾ ಸೇವಾ ಟ್ರಸ್ಟ್, ಹುಬ್ಬಳ್ಳಿ, ದತ್ತಿನಿಧಿ ಪ್ರಶಸ್ತಿ, ಅಶೋಕ ಚಂದರಗಿ -ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಡಾ. ಸಿ ಸೋಮಶೇಖರ ನೀಡುವ ದತ್ತಿನಿಧಿ ಪ್ರಶಸ್ತಿ), ಬಿ.ರವೀಂದ್ರ ಶೆಟ್ಟಿ -ಹವ್ವಾ ಹಸನ್ ಫೌಂಡೇಶನ್ ಕುದ್ಕೊಳಿ ಸಂಸ್ಥಾಪಕ ಅಬ್ದುಲ್ಲ ಮಾದುಮೂಲೆ ನೀಡುವ ದತ್ತಿನಿಧಿ ಪ್ರಶಸ್ತಿ, ಜಿ. ಸುಬ್ರಾಯ ಭಟ್ ಭಟ್ಕಳ- ಅನಿವಾಸಿ ಉದ್ಯಮಿ ಕಲಾಪೋಷಕ ಶ್ರೀ ಜೋಸೆಫ್ ಮಾಥಿಯಾಸ್ ನೀಡುವ ದತ್ತಿನಿಧಿ ಪ್ರಶಸ್ತಿ, ಇಬ್ರಾಹಿಂ ಅಡ್ಕಸ್ಥಳ-ಕೆವಿಆರ್ ಠ್ಯಾಗೋರ್ ಸ್ಮರಣಾರ್ಥ ಶ್ರೀಮತಿ ಭಾಗ್ಯ ಠ್ಯಾಗೋರ್ ನೀಡುವ ದತ್ತಿನಿಧಿ ಪ್ರಶಸ್ತಿ, ವಾಲ್ಟರ್ ನಂದಳಿಕೆ-ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಚಿವ ಶ್ರೀ ಭೀಮಣ್ಣ ಖಂಡ್ರೆ, ಇವರ ಹೆಸರಿನ ದತ್ತಿನಿಧಿ ಪ್ರಶಸ್ತಿ, ಪ್ರಾಯೋಜಕರು ದೀಪಕ್ ವಿ ಕೆ, ಎಚ್.ಬಿ. ಮದನಗೌಡ -ಡಾ. ಸುಧಾಕರ ಶೆಟ್ಟಿ ಪುಣೆ, ನೀಡುವ ದತ್ತಿನಿಧಿ ಪ್ರಶಸ್ತಿ, ನವೀನ್ ಕೆ. ಇನ್ನ, ಮುಂಬೈ - ಮುಹಮ್ಮದ್ ಇಬ್ರಾಹಿಂ ಪಾರ ಸ್ಮರಣಾರ್ಥ ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲ ನೀಡುವ ದತ್ತಿನಿಧಿ ಪ್ರಶಸ್ತಿ, ಡಾ. ನಂದ ಕುಮಾರ್ ಹೆಗ್ಡೆ -ಮೊಗರೋಡಿ ಗೋಪಾಲಕೃಷ್ಣ ಮೇಲಾಂಟ ಸ್ಮರಣಾರ್ಥ ಶ್ರೀ ಹರ್ಷ ಮೇಲಾಂಟ ನೀಡುವ ದತ್ತಿನಿಧಿ ಪ್ರಶಸ್ತಿ, ಅನಿಲ್ ಹೆಚ್.ಟಿ.-ಉದ್ಯಮಿ, ಸಮಾಜ ಸೇವಕ ಶ್ರೀ ಅಶ್ರಫ್ ಶಾ ಮಂತೂರು ನೀಡುವ ದತ್ತಿನಿಧಿ ಪ್ರಶಸ್ತಿ), ಸದಾನಂದ ಜೋಶಿ- ಧರ್ಮದರ್ಶಿ ಅಣ್ಣಿ ಸಿ. ಶೆಟ್ಟಿ ನವಿಮುಂಬೈ ನೀಡುವ ದತ್ತಿನಿಧಿ ಪ್ರಶಸ್ತಿ), ದಿವಾಕರ ಬಿ. ಶೆಟ್ಟಿ ಕೆಯುಡಬ್ಲ್ಯೂಜೆ ರಾಜ್ಯ ಸಮಿತಿ ನೀಡುವ ದತ್ತಿನಿಧಿ ಪ್ರಶಸ್ತಿ, ಬಿ.ಪಿ ಶೇಣಿ -ಕೆಯುಡಬ್ಲ್ಯೂಜೆ ರಾಜ್ಯ ಸಮಿತಿ ನೀಡುವ ದತ್ತಿನಿಧಿ ಪ್ರಶಸ್ತಿಗಳಿಗೆ ಆಯ್ಕೆ ಆಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಪ್ರಕಾಶ್‌ಮತ್ತಿಹಳ್ಳಿ, ಕೆಯುಡಬ್ಲ್ಯುಜೆ ಕಾಸರಗೋಡು ಜಿಲ್ಲಾ ಘಟಕದ ಅಧ್ಯಕ್ಷ ಎಆರ್ ಸುಬ್ಬಯಕಟ್ಟೆ, ಪ್ರಧಾನ ಕಾರ್ಯದರ್ಶಿ ಕೆ. ಗಂಗಾಧರ್, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಶಿವರೆಡ್ಡಿ ಖ್ಯಾಡೆದ್, ನ್ಯಾಯವಾದಿ ಥೋಮಸ್ ಡಿಸೋಜ, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಾದ ಝಡ್.ಎ. ಕಯ್ಯಾರ್, ಪುರುಷೋತಮ ಪೆರ್ಲ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.