44 ನೇ ವರ್ಷದ ಸಾರ್ವಜನಿಕ ಮಂಜೇಶ್ವರ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.
ಜುಲೈ 29, 2024
0
44 ನೇ ವರ್ಷದ ಸಾರ್ವಜನಿಕ ಮಂಜೇಶ್ವರ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.
ಮಂಜೇಶ್ವರ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ನಡೆಯಲಿರುವ ಈ ವರ್ಷದ 44 ನೇ
ಮಂಜೇಶ್ವರ ಶ್ರೀ ಗಣೇಶೋತ್ಸವದ
ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ನಡೆಯಿತು. ಕನಿಲ ಶ್ರೀ ಭಗವತೀ ಕ್ಷೇತ್ರದ ದೊಡ್ಡ ಕಾರ್ನವರ್ ರವರು ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿ ಅಧ್ಯಕ್ಷ ನ್ಯಾ. ನವೀನ್‌ರಾಜ್ ಕೆ.ಜೆ ವಹಿಸಿದರು. ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದ ಅಧ್ಯಕ್ಷ ಪದ್ಮನಾಭ ಕಡಪ್ಪರ, ಸಂಘಟನಾ ಕಾರ್ಯದರ್ಶಿ ಹರೀಶ್ ಶೆಟ್ಟಿ ಮಾಡ, ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುರೇಶ್ ಗಾಣಿಂಜಾಲ್, ಕೋಶಾಧಿಕಾರಿ ನರೇಂದ್ರ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು. ಈ ವರ್ಷದ ಗಣೇಶೋತ್ಸವವು ಸೆಪ್ಟೆಂಬರ್ 7 ರಿಂದ ಮೊದಲ್ಗೊಂಡು 10 ರ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿಂದ ಜರುಗಲಿದೆ. ಕಾರ್ಯಕ್ರಮದ ವಿವರ ಈ ಕೆಳಗಿನಂತಿದೆ. 👇











