ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ನಾಳೆ "ಸಹಕಾರಿ ಪಿತಾಮಹ" ದಿ। ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ನಾಳೆ.
ಜುಲೈ 19, 2024
0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಿ. SCDCC BANK LTD. ವತಿಯಿಂದ "ಸಹಕಾರಿ ಪಿತಾಮಹ" ದಿ। ಮೊಳಹಳ್ಳಿ ಶಿವರಾವ್ ಸ್ಮರಣಾರ್ಥ 2023 - 24ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹತ್ತನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಸಮಾರಂಭವು ನಾಳೆ ಜುಲೈ 20 ರಂದು ಶನಿವಾರ ಸಂಜೆ 4.00 ಘಂಟೆಗೆ ಕೊಡಿಯಾಲ್ ಬೈಲ್ ನಲ್ಲಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ
ಮೊಳಹಳ್ಳಿ ಶಿವರಾವ್ ಸಭಾಭವನ, "ಉತ್ಕೃಷ್ಟ ಸಹಕಾರಿ ಸೌಧ"ದಲ್ಲಿ ನಡೆಯಲಿದೆ. ಮಂಗಳೂರು ಕಣಚೂರು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧ್ಯಕ್ಷ ಡಾ| ಯು. ಕೆ. ಮೋನು ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಿರುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು.