Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಸಾರ್ವಜನಿಕ ಮಂಜೇಶ್ವರ ಶ್ರೀ ಗಣೇಶೋತ್ಸವದ ವಾರ್ಷಿಕ ಮಹಾಸಭೆ.

ಸಾರ್ವಜನಿಕ ಮಂಜೇಶ್ವರ ಶ್ರೀ ಗಣೇಶೋತ್ಸವದ ವಾರ್ಷಿಕ ಮಹಾಸಭೆ.
ಮಂಜೇಶ್ವರ: ಮಂಜೇಶ್ವರ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಜೇಶ್ವರ ಶ್ರೀ ಗಣೇಶೋತ್ಸವದ ವಾರ್ಷಿಕ ಮಹಾಸಭೆ ನಿನ್ನೆ ಸಂಜೆ ನಡೆಯಿತು. ಈ ವೇಳೆ ಈ ವರ್ಷ ನಡೆಯುವ 44 ನೇ ವರ್ಷದ ಮಂಜೇಶ್ವರ ಶ್ರೀ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು. ಗೌರವಾಧ್ಯಕ್ಷರಾಗಿ ರೋಹಿದಾಸ್ ಎಸ್. ಬಂಗೇರ,
ಅಧ್ಯಕ್ಷರಾಗಿ ನ್ಯಾಯವಾದಿ ನವೀನ್ ರಾಜ್ ಕೆ. ಜೆ, ಪುನರಾಯ್ಕೆಯಾದರು.
ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಗಾಣಿಂಜಾಲ್,
ಕೋಶಾಧಿಕಾರಿಯಾಗಿ ನರೇಂದ್ರ ಹೆಗಡೆ ಆಯ್ಕೆಯಾದರು . ಸಭೆಯ ಅಧ್ಯಕ್ಷತೆಯನ್ನು ಪ್ರಸ್ತುತ ಅಧ್ಯಕ್ಷರಾದ ಶ್ರೀ ನವೀನ್ ರಾಜ್ ಕೆ.ಜೆ ವಹಿಸಿದ್ದರು. ಹೊಸಂಗಡಿ ಅಯ್ಯಪ್ಪ ಕ್ಷೇತ್ರ ಅಧ್ಯಕ್ಷರಾದ ಶ್ರೀ ಪದ್ಮನಾಭ ಕಡಪ್ಪರ, ಕ್ಷೇತ್ರದ ಪ್ರಧಾನ ಅರ್ಚಕರಾದ ತಿರುಮಲೇಶ ಆಚಾರ್ಯ, ಹರೀಶ್ ಶೆಟ್ಟಿ ಮಾಡ ಮುಂತಾದವರು ಉಪಸ್ಥಿತರಿದ್ದರು. ಮಾಜಿ ಕಾರ್ಯದರ್ಶಿ ಅವಿನಾಶ್ ಹೆಗ್ಡೆ ಸ್ವಾಗತಿಸಿ, ಹರೀಶ್ ಶೆಟ್ಟಿ ಮಾಡ ವಂದಿಸಿದರು. 44 ನೇ ವರ್ಷದ ಮಂಜೇಶ್ವರ ಗಣೇಶೋತ್ಸವ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಸೆಪ್ಟೆಂಬರ್ ತಿಂಗಳ 7 ರಿಂದ 10 ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿಂದ ನಡೆಯಲಿದ್ದು, 10 ರಂದು ವೈಭವದ ಶೋಭಾಯಾತ್ರೆ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.