Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಮೀಂಜ ಬಂಟರ ಸಂಘ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣೆ.

ಮೀಂಜ ಬಂಟರ ಸಂಘ ವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣೆ.
ಮೀಯಪದವು: ಬಂಟರ ಸಂಘ ಮೀಂಜ ಇದರ ವತಿಯಿಂದ ಸಂಘದ ಕಚೇರಿಯ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಪಿಯುಸಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಜರುಗಿತು. ಸಂಘದ ಅಧ್ಯಕ್ಷ ಜಗದೀಶ ಶೆಟ್ಟಿ ಎಲಿಯಾಣರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ಮೀಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಂದರಿ ಆರ್.ಶೆಟ್ಟಿ ಉದ್ಘಾಟಿಸಿದರು.
ಕುಳೂರು ಕನ್ಯಾನ ಚಂದ್ರಹಾಸ ಶೆಟ್ಟಿ ಯವರು ಎಸ್. ಎಸ್. ಎಲ್. ಸಿ ಮತ್ತು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಿದರು.
ಈ ವೇಳೆ ಪಿಯುಸಿ ಮತ್ತು ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಸಮಾರಂಭದಲ್ಲಿ
ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯರಾದ ಸಂಕಬೈಲು ಸತೀಶ್ ಅಡಪರವರನ್ನು ಹಾಗೂ
ಮೀಂಜ ಬಂಟರ ಸಂಘದ ಕಟ್ಟಡ ನಿರ್ಮಾಣಕ್ಕೆ ಉತ್ತಮ ದೇಣಿಗೆ ನೀಡಿದ ಬೆಜ್ಜಂಗಳಗುತ್ತು ಜಯರಾಮ ರೈ ಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ಸಮಾರಂಭದಲ್ಲಿ ಕಾಸರಗೋಡು ಜಿಲ್ಲಾ ಬಂಟರ ಸಂಘದ ಮಾಜಿ ಕಾರ್ಯದರ್ಶಿ ದಾಮೋದರ ಶೆಟ್ಟಿ ಮಜಿಬೈಲು, ಮೀಂಜ ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ಚಂದ್ರಶೇಖರ್ ಶೆಟ್ಟಿ ಪಳ್ಳತ್ತಡ್ಕ, ಕೆ.ನಾರಾಯಣ ನಾಯ್ಕ್ ನಡುಹಿತ್ತಿಲು ಕುಳೂರು, ಕೋಶಾಧಿಕಾರಿ ದರ್ಭೆ ಮನೋಹರ ಚೌಟ ಉಪಸ್ಥಿತರಿದ್ದು, ಶುಭ ಹಾರೈಸಿದರು. ಸಂಘಟನಾ ಕಾರ್ಯದರ್ಶಿ ಧರ್ಮೆಮಾರು ಹರೀಶ್ ಶೆಟ್ಟಿ ಸ್ವಾಗತಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ಬೆಜ್ಜ ದೇವಿಪ್ರಸಾದ್ ಶೆಟ್ಟಿ ವಂದಿಸಿ, ಪ್ರಧಾನ ಕಾರ್ಯದರ್ಶಿ ದಡ್ಡಂಗಡಿ ಅರವಿಂದಾಕ್ಷ ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.