ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ (51) ನಿಧನ.
ಜುಲೈ 11, 2024
0
ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ (51) ನಿಧನ.
ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ (51) ನಿಧನರಾಗಿದ್ದಾರೆ. ಅರ್ಬುದ ರೋಗದಿಂದ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ಸೀರಿಯಲ್ ಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದರು. ಕಿರಿತೆರೆಯ ಅನೇಕ ಕಾರ್ಯಕ್ರಮಗಳನ್ನು ಅಪರ್ಣಾ ನಡೆಸಿಕೊಟ್ಟಿದ್ದರು. ನಮ್ಮ ಮೆಟ್ರೋ ಅನೌನ್ಸ್ಮೆಂಟ್ ಸೇರಿದಂತೆ ಅನೇಕ ಪ್ರಕಟಣೆಗಳಿಗೆ ಅವರು ಧ್ವನಿ ನೀಡಿದ್ದರು. ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ ಅವರು ನಿರೂಪಿಸಿದರು. ನಂತರ ಭಾರತ ಸರ್ಕಾರದ ‘ವಿವಿಧ ಭಾರತಿ’ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು. 1998 ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಸತತ ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಬೆಂಗಳೂರಿನ ಮೆಟ್ರೋ ರೈಲಿನಲ್ಲಿ ಕೇಳಿಸುವ ಅಪರ್ಣಾ ಧ್ವನಿಯ ಹಿಂದಿದೆ ಜವಾಬ್ದಾರಿಯ ಕಥೆ. ಕಿರುತೆರೆಯಲ್ಲಿ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ಅಪರ್ಣಾ ನಟಿಸಿದ್ದರು. 2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ನಲ್ಲಿ ಅವರು ಭಾಗವಹಿಸಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ‘ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಎಂಬ ಪಾತ್ರವನ್ನು ಅಪರ್ಣಾ ಮಾಡಿದ್ದರು.


