Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘ ಮಂಜೇಶ್ವರ ಉಪಜಿಲ್ಲಾ ಘಟಕದ ವತಿಯಿಂದ ಶಾಲಾ ಮಕ್ಕಳಿಗೆ ವಾಚನಾ ಮಾಸಾಚರಣೆ ಕಾರ್ಯಕ್ರಮ.

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕ ಸಂಘ ಮಂಜೇಶ್ವರ ಉಪಜಿಲ್ಲಾ ಘಟಕದ ವತಿಯಿಂದ ಶಾಲಾ ಮಕ್ಕಳಿಗೆ ವಾಚನಾ ಮಾಸಾಚರಣೆ ಕಾರ್ಯಕ್ರಮ.
ಮಂಜೇಶ್ವರ: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಮಂಜೇಶ್ವರ ಉಪಜಿಲ್ಲಾ ಘಟಕದ ವತಿಯಿಂದ ವಾಚನಾ ಮಾಸಾಚರಣೆ ಕಾರ್ಯಕ್ರಮವು ಶ್ರೀ ಶಾರದಾ ಬೋವೀಸ್ ಎ.ಯು.ಪಿ.ಶಾಲೆ ಐಲದಲ್ಲಿ ನಡೆಸಲಾಯಿತು. ಆ ‌ಪ್ರಯುಕ್ತ ಶಾಲೆಗಳಲ್ಲಿ ಸ್ಪರ್ಧೆಗಳನ್ನು ನಡೆಸಲಾಗಿದ್ದು ವಿಜೇತರಾದ ಎಲ್.ಪಿ., ಯು. ಪಿ., ಹೈಸ್ಕೂಲ್ ವಿಭಾಗದ ಮಕ್ಕಳಿಗೆ ಉಪಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಯಿತು‌.
ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಐಲ ಶಾಲೆಯ ಪ್ರಬಂಧಕರಾದ ಶ್ರೀ ಆನಂದ ಕೆ ರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಕೇರಳ ಪ್ರಾಂತ್ಯ ಕನ್ನಡ ಅಧ್ಯಾಪಕರ ಸಂಘ ಮಂಜೇಶ್ವರ ಉಪಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀ ಜಯರಾಮ ಚೆಕ್ಕೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸಂಘಟನೆಯ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ರಾವ್ ಪಿ.ಬಿ. ಉಪಸ್ಥಿತರಿದ್ದರು. ಶಾಲಾ ಹಿರಿಯ ಶಿಕ್ಷಕಿ ಶ್ರೀಮತಿ ಅಮಿತ, ಸಂಘಟನೆಯ ಅಧಿಕೃತ ವಕ್ತಾರ ಶ್ರೀ ಸುಕೇಶ್ ಎ, ಸಂಘಟನಾ ಕಾರ್ಯದರ್ಶಿ ಶ್ರೀ ಜಬ್ಬಾರ್ ಬಿ ಶುಭಾಸಂಶನೆಗೈದರು. ಇದೇ ಸಂದರ್ಭದಲ್ಲಿ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನೆರವೇರಿತು. ಮಂಜೇಶ್ವರ ಘಟಕದ ಕಾರ್ಯದರ್ಶಿ ಶ್ರೀ ಜೀವನ್ ಕುಮಾರ್ ಸ್ವಾಗತಿಸಿದರು. ಖಜಾಂಜಿಯಾದ ಶ್ರೀ ಶ್ರೀರಾಮ ಕೆದುಕೊಡಿಯವರು ಧನ್ಯವಾದ ಸಮರ್ಪಿಸಿದರು. ಸದಸ್ಯರಾದ ಶ್ರೀಮತಿ ಕವಿತಾ ಕಾರ್ಯಕ್ರಮದ ನಿರೂಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.