Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಮಂಗಳೂರಿನಲ್ಲಿ ಮಣ್ಣು ಕುಸಿತ ದುರಂತ: ಉತ್ತರ ಪ್ರದೇಶ ನಿವಾಸಿ ಚಂದನ್ ಸಾವು. ಮತ್ತೋರ್ವ ಪವಾಡಸದೃಶ್ಯ ರೀತಿ ಪಾರು.

ಮಂಗಳೂರಿನಲ್ಲಿ ಮಣ್ಣು ಕುಸಿತ ದುರಂತ: ಓರ್ವ ಸಾವು. ಮತ್ತೋರ್ವ ಪವಾಡಸದೃಶ್ಯ ರೀತಿ ಪಾರು.
ಮಂಗಳೂರು: ನಗರದ ಬಲ್ಮಠ ಪ್ರದೇಶದಲ್ಲಿ ಕಾಮಗಾರಿ ವೇಳೆ ಭೂಕುಸಿತಗೊಂಡು ಮಣ್ಣಿನಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದಾರೆ. ಚಂದನ್ ಕುಮಾರ್ ಮೃತ ಕಾರ್ಮಿಕ. ಮೂಲತಃ ಉತ್ತರ ಪ್ರದೇಶ ಮೂಲದವರು. ಸತತ ಆರೂವರೆ ಗಂಟೆ ಕಾರ್ಯಾಚರಣೆ ನಡೆಸಿ ಚಂದನ್ ಕುಮಾರ್ ನನ್ನು ಹೊರತೆಗೆಯಲು ರಕ್ಷಣಾ ತಂಡ ಹರಸಾಹಸ ಪಟ್ಟಿತ್ತು. ಆದರೆ ರಾಡ್, ಮಣ್ಣು, ಹಲಗೆಯ ನಡುವೆ ಸಿಲುಕಿಕೊಂಡಿದ್ದರಿಂದ ಕಾರ್ಮಿಕ ಅಷ್ಟರಲ್ಲಿ ಉಸಿರು ಚೆಲ್ಲಿದ್ದಾರೆ. ಹೊರತೆಗೆದ ಚಂದನ್ ಕುಮಾರ್ ಆರೋಗ್ಯವನ್ನು ವೈದ್ಯರು ತಪಾಸಣೆ ಮಾಡಿದ್ದರು. ಆತನ ಹೃದಯ ಭಾಗದಲ್ಲಿ ಕಾರ್ಡಿಯೋ ಪಲ್ಮನರಿ ಮಾಡುವ ಮೂಲಕ ಪುನರುಜ್ಜೀವನಕ್ಕೆ ಪ್ರಯತ್ನಿಸಿದ್ದರು. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಕಾರ್ಮಿಕ ಮೃತಪಟ್ಟಿದ್ದಾರೆ. ಕಾರ್ಯಾಚರಣೆ ಮುಗಿದ ಬಳಿಕ ಡಿಸಿ ಮುಲ್ಲೈ ಮುಗಿಲನ್ ಪ್ರತಿಕ್ರಿಯಿಸಿದ್ದು, ಚಂದನ್ ಕುಮಾರ್ ರನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆತನ ಪರಿಸ್ಥಿತಿ ಗಂಭೀರವಾಗಿತ್ತು. ಪ್ರಾಥಮಿಕ ಚಿಕಿತ್ಸೆ ಕೂಡ ನೀಡಲಾಗಿದೆ. ಆದರೆ ಚಂದನ್ ಗೆ ಪಲ್ಸ್ ರೇಟ್ ತುಂಬಾ ಕಡಿಮೆಯಾಗಿತ್ತು. ಮಣ್ಣು ಬಿದ್ದಿರುವಾಗಲೇ ಸಮಸ್ಯೆಯಾಗಿರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.