Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಕೇರಳ ಗಡಿಭಾಗದಲ್ಲಿ ಎಂಡಿಎಂಎ ಡ್ರಗ್ಸ್ ಮಾರುತ್ತಿದ್ದ ಮಂಜೇಶ್ವರದ ಇಬ್ಬರ ಸೆರೆ.

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ; ಕೇರಳ ಗಡಿಭಾಗದಲ್ಲಿ ಎಂಡಿಎಂಎ ಡ್ರಗ್ಸ್ ಮಾರುತ್ತಿದ್ದ ಮಂಜೇಶ್ವರದ ಇಬ್ಬರ ಸೆರೆ.
ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆಹಚ್ಚಿ 15 ಗ್ರಾಂ ಎಂಡಿಎಂಎ ನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿಯೊಂದಿಗೆ ಮಂಗಳೂರು ಸಿಸಿಬಿ ಪೊಲೀಸರು ಕೇರಳ ಗಡಿಭಾಗ ತಲಪಾಡಿ ಕೆ.ಸಿ. ರೋಡ್ ಬಳಿ ದ್ವಿಚಕ್ರ ವಾಹನವನ್ನು ಪತ್ತೆಹಚ್ಚಿ ಮಂಜೇಶ್ವರ ಬಡಾಜೆ ನಿವಾಸಿಗಳಾದ ಅಬ್ದುಲ್ ಸಲಾಂ ಯಾನೆ ಸಲಾಂ (30), ಸೂರಜ್ ರೈ ಯಾನೆ ಅಂಕಿ(26) ಎಂಬವರನ್ನು ಬಂಧಿಸಿದ್ದಾರೆ. ಅವರ ವಶದಿಂದ ರೂ.75,000 ಮೌಲ್ಯದ 15 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಎರಡು ಮೊಬೈಲ್ ಫೋನ್, ಡಿಜಿಟಲ್ ತೂಕಮಾಪಕ ಹಾಗೂ ಡಿಯೋ ದ್ವಿಚಕ್ರ ವಾಹನ ಸ್ವಾಧೀನಪಡಿಸಲಾಗಿದೆ. ವಶಪಡಿಸಿದ ಸೊತ್ತಿನ ಮೌಲ್ಯ ರೂ. 1,65,000/- ಆಗಬಹುದು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ ಅಬ್ದುಲ್ ಸಲಾಂ ಎಂಬಾತನ ವಿರುದ್ಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಇನ್ನೋರ್ವ ಆರೋಪಿ ಸೂರಜ್ ರೈ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾ‌ರ್ ನಾಯ್ಕ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್‌ಐ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.