Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

67 ನೇ ವರ್ಷದ ಸಾರ್ವಜನಿಕ ಮಂಜೇಶ್ವರ ಶ್ರೀ ಶಾರದಾ ಮಹೋತ್ಸವ. ನೂತನ ಪದಾಧಿಕಾರಿಗಳ ಪದಗ್ರಹಣ.

67 ನೇ ವರ್ಷದ ಸಾರ್ವಜನಿಕ ಮಂಜೇಶ್ವರ ಶ್ರೀ ಶಾರದಾ ಮಹೋತ್ಸವ. ನೂತನ ಪದಾಧಿಕಾರಿಗಳ ಪದಗ್ರಹಣ.
ಮಂಜೇಶ್ವರ: 67 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಮಂಜೇಶ್ವರ ಶ್ರೀ ಮತ್ ಅನಂತೇಶ್ವರ ದೇವಸ್ಥಾನದಲ್ಲಿ ಜರುಗಿತು. ಸಭೆಯಲ್ಲಿ ಗತ ವರ್ಷದ ಲೆಕ್ಕಪತ್ರ ಮಂಡನೆ, ವರದಿ ವಾಚನ ನಡೆಯಿತು. ಬಳಿಕ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.
ಅಧ್ಯಕ್ಷರಾಗಿ ಲಿಖಿತ್ ಶಿವಾಜಿ ಪ್ರಭು,
ಪ್ರಧಾನ ಕಾರ್ಯದರ್ಶಿಯಾಗಿ ನರಸಿಂಹ ಪ್ರಭು,
ಕೋಶಾಧಿಕಾರಿಯಾಗಿ ದಿನೇಶ್ ಶೆಣೈ ಆಯ್ಕೆಯಾದರು. ಈ ವರ್ಷದ 67 ನೇ ಮಂಜೇಶ್ವರ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವವು ಅಕ್ಟೋಬರ್ 8 ರಿಂದ ಮೊದಲ್ಗೊಂಡು 13 ರ ತನಕ ವಿವಿಧ ವೈದಿಕ, ಧಾರ್ಮಿಕ, ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿಂದ ಜರಗಿಸಲು ಸಭೆ ತೀರ್ಮಾನಿಸಿತು. ಅಲ್ಲದೆ ಈ ಬಾರಿ ವಿಶೇಷವಾಗಿ ನೂತನ ಬೆಳ್ಳಿಯ ನವಿಲನ್ನು ದೇವಿಗೆ ಸಮರ್ಪಿಸಲು ಸಭೆ ತೀರ್ಮಾನಿಸಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.