Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಹೊಸಂಗಡಿ ಪ್ರೇರಣಾ ಸಭಾಂಗಣದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಹಾಗೂ ವಿಪತ್ತು ನಿರ್ವಹಣಾ ಪ್ರಾತ್ಯಕ್ಷಿಕೆ.

ಹೊಸಂಗಡಿ ಪ್ರೇರಣಾ ಸಭಾಂಗಣದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಹಾಗೂ ವಿಪತ್ತು ನಿರ್ವಹಣಾ ಪ್ರಾತ್ಯಕ್ಷಿಕೆ.
ಮಂಜೇಶ್ವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಂಜೇಶ್ವರ, ಉಡುಪಿ, ಪ್ರಾದೇಶಿಕ ವಿಭಾಗದ ವಿಟ್ಲ, ಕಾಸರಗೋಡು, ಮಂಜೇಶ್ವರ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರವು ಹೊಸಂಗಡಿ ಪ್ರೇರಣಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರವನ್ನು ಕಾಸರಗೋಡು ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ ಗೋಪಾಲ ಶೆಟ್ಟಿ ಅರಿಬೈಲ್ ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ರವರು ಆಶಯದ ನುಡಿಗಳನ್ನಾಡಿದರು. ವಿಟ್ಲ, ಕಾಸರಗೋಡು, ಮಂಜೇಶ್ವರ ತಾಲೂಕಿನ ಸಾಧಕ ತಂಡಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಈ ವೇಳೆ ಎಲ್ಲಾ ಸ್ವಯಂ ಸೇವಕರಿಗೆ ಸಮವಸ್ತ್ರವನ್ನು ವಿತರಿಸಲಾಯಿತು. ಸಭಾ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ಹಾಗೂ ಆರೋಗ್ಯ ರಕ್ಷಾ ವಿಮೆಯ ಮಂಜೂರಾತಿ ಪತ್ರವನ್ನು ವಿತರಿಸಲಾಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತೋಡಿರವರು ವಹಿಸಿದ್ದರು.
ಈ ಸಂದರ್ಭದಲ್ಲಿ ಕಾಸರಗೋಡು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಅಖಿಲೇಶ್ ನಗುಮುಗಂ, ಕಾಸರಗೋಡು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಅಶ್ವಥ್ ಪೂಜಾರಿ ಲಾಲ್ ಬಾಗ್, ಉಷಾ ಫೈರ್ & ಸೇಫ್ಟಿ ಕಂಪನಿಯ ತರಬೇತುದಾರರಾದ ಸಂತೋಷ ಪೀಟರ್ ಡಿ'ಸೋಜಾ, ವಿಪತ್ತು ನಿರ್ವಹಣಾ ವಿಭಾಗದ ಯೋಜನಾಧಿಕಾರಿಗಳಾದ ಜೈವಂತ್ ಪಟಗಾರ, ಜನಜಾಗೃತಿ ಮೇಲ್ವಿಚಾರಕರಾದ ನಿತೇಶ್ .ಕೆ ಹಾಗೂ ಕಾಸರಗೋಡು, ಮಂಜೇಶ್ವರ ತಾಲೂಕಿನ ಮೇಲ್ವಿಚಾರಕರು, ಆಡಳಿತ ಪ್ರಬಂಧಕರು ಮತ್ತು ವಿಟ್ಲ, ಕಾಸರಗೋಡು, ಮಂಜೇಶ್ವರ ತಾಲೂಕಿನ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕರು, ಘಟಕ ಪ್ರತಿನಿಧಿಗಳು, ಸ್ವಯಂ ಸೇವಕರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮವನ್ನು ತಲಪಾಡಿ ವಲಯ ಮೇಲ್ವಿಚಾರಕರಾದ ಭಾಸ್ಕರ ನಿರೂಪಿಸಿದರು, ಕಾಸರಗೋಡು ತಾಲೂಕು ಕ್ಷೇತ್ರ ಯೋಜನಾಧಿಕಾರಿಗಳಾದ ಮುಖೇಶ್ ಸ್ವಾಗತಿಸಿ, ಜನಜಾಗೃತಿ ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯ ವಂದಿಸಿದರು.
ಕಾರ್ಯಕ್ರಮದ ನಂತರ ವಿಪತ್ತು ನಿರ್ವಹಣಾ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.