ಸುಂಕದಕಟ್ಟೆ ವಲಯದ ಪಾವಲ ವಿಭಾಗದ ಪ್ರಗತಿ ಬಂಧು ಸ್ವ - ಸಹಾಯ ಸಂಘಗಳ ಒಕ್ಕೂಟ ಮತ್ತು ಸ್ನೇಹ ಜ್ಯೋತಿ ಜ್ಞಾನವಿಕಾಸ ಕೇಂದ್ರ ಪಾವಳ ಇದರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ.
ಆಗಸ್ಟ್ 06, 2024
0
ಸುಂಕದಕಟ್ಟೆ ವಲಯದ ಪಾವಲ ವಿಭಾಗದ ಪ್ರಗತಿ ಬಂಧು ಸ್ವ - ಸಹಾಯ ಸಂಘಗಳ ಒಕ್ಕೂಟ ಮತ್ತು ಸ್ನೇಹ ಜ್ಯೋತಿ ಜ್ಞಾನವಿಕಾಸ ಕೇಂದ್ರ ಪಾವಳ ಇದರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ.
ಮಂಜೇಶ್ವರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ ಟ್ರಸ್ಟ್ (ರಿ.) ಮಂಜೇಶ್ವರ ತಾಲೂಕು ಇದರ ಮಾರ್ಗದರ್ಶನದಲ್ಲಿ ಸುಂಕದಕಟ್ಟೆ ವಲಯದ ಪಾವಲ ವಿಭಾಗದ ಪ್ರಗತಿ ಬಂಧು ಸ್ವ - ಸಹಾಯ ಸಂಘಗಳ ಒಕ್ಕೂಟ ಮತ್ತು ಸ್ನೇಹ ಜ್ಯೋತಿ ಜ್ಞಾನವಿಕಾಸ ಕೇಂದ್ರ ಪಾವಳ ಇದರ ಜಂಟಿ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ವಿಶ್ವಪ್ರಭ ಸಭಾಭವನ ಸುಂಕದಕಟ್ಟೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಜನಜಾಗ್ರತಿ ವೇದಿಕೆ ಅಧ್ಯಕ್ಷರಾದ ಡಾ. ಜಯಪ್ರಕಾಶ್ ನಾರಾಯಣ ತೊಟ್ಟಿತೋಡಿಯವರು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವಂ. ಸ್ವಾಮಿ. ಬಾಸಿಲ್ ವಾಜ್ ಧರ್ಮಗುರುಗಳು ವರ್ಕಾಡಿ ದೇವಾಲಯ ಇವರು ಆಶೀರ್ವಚನವನ್ನು ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವನಾಥ ಆಚಾರ್ಯ ಅಧ್ಯಕ್ಷರು ಪಾವಲ ಒಕ್ಕೂಟ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನ್ಯಾಯವಾದಿಗಳು ಕರ್ನಾಟಕ ಸರಕಾರ ಪ್ರತಿಷ್ಠಿತ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕಾರತರಾದ ಶ್ರೀಮತಿ ಶೈಲಜಾ ರಾಜೇಶ್ ರವರು ಹಿಂದಿನ ಕಾಲದಲ್ಲಿ ಆಟಿ ತಿಂಗಳ ತುಳುವರ ಕಷ್ಟದ ದಿನಗಳ ಬಗ್ಗೆ ಹಿಂದಿನ ಕಾಲದ ಆಹಾರ ಪದ್ಧತಿಯ ಬಗ್ಗೆ ಆಟಿಕಲಂಜದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀಮತಿ ಶಶಿಕಲಾ ಸುವರ್ಣ ಯೋಜನಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ (ರಿ.) ಮಂಜೇಶ್ವರ, ಡಿ.ಎಂ.ಕೆ ಮಹಮ್ಮದ್ ಅಧ್ಯಕ್ಷರು ಜಮಾಅತ್ ಪೊಯ್ಯತ್ತಬೈಲ್, ಗೋಪಾಲ ಶೆಟ್ಟಿ ಅರಿಬೈಲು ಸ್ಥಾಪಕ ಅಧ್ಯಕ್ಷರು ಜನಜಾಗೃತಿ ವೇದಿಕೆ ಮಂಜೇಶ್ವರ, ಸೋಮಶೇಖರ ಸುವರ್ಣ ವಲಯ ಅಧ್ಯಕ್ಷರು ಸುಂಕದಕಟ್ಟೆ ವಲಯ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯಕ್ಷಗಾನ ಕಲಾವಿದರಾದ ಚಂದ್ರಶೇಖರ್ ಆಚಾರ್ಯರನ್ನು ಸನ್ಮಾನಿಸಲಾಯಿತು. ಸ್ವ ಸಹಾಯ ಸಂಘದ ಸದಸ್ಯರ ಮಕ್ಕಳಿಗೆ ಮಂಜೂರಾದ ಸುಜ್ಞಾನನಿಧಿ ಶಿಷ್ಯವೇತನದ ಮಂಜೂರಾತಿ ಪತ್ರವನ್ನು ವೇದಿಕೆಯಲ್ಲಿ ನೀಡಲಾಯಿತು. ಶ್ರೀನಿವಾಸ ಆಚಾರ್ಯರವರಿಗೆ ಸಹಾಯಧನ ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಯಿತು. ಆಟಿ ಕಳೆಂಜ ನರ್ತನ ಸೇರಿದಂತೆ ಆಟಿ ತಿಂಗಳ ತಿನಿಸುಗಳನ್ನು ಪ್ರದರ್ಶಿಸಲಾಯಿತು. ವಲಯದ ಮೇಲ್ವಿಚಾರಕರಾದ ಕೃಷ್ಣಪ್ಪ ಪೂಜಾರಿ ಸ್ವಾಗತಿಸಿ, ಚೇತನ್ ವರ್ಕಾಡಿ ಕಾರ್ಯಕ್ರಮ ನಿರೂಪಿಸಿದರು. ಸಂಯೋಜಕೀಯಾದ ಸುಮನರವರು ವಂದಿಸಿದರು. ಪಾವಲ ಒಕ್ಕೂಟದ ಸೇವಾಪ್ರತಿನಿಧಿ ಅಶ್ವಿನಿ, ವಲಯದ ಸೇವಾ ಪ್ರತಿನಿಧಿಗಳು, ಜ್ಞಾನವಿಕಾಸ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ನವಜೀವನ ಸದಸ್ಯರು, ವಲಯದ ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು ಗಣ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.










