Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಮೂಡಂಬೈಲು ಸರಕಾರಿ ಪ್ರೌಢ ಶಾಲೆಯಲ್ಲಿ ಶತಮಾನೋತ್ಸವದ ವರ್ಷಾಚರಣೆಯ ಉದ್ಘಾಟನಾ ಸಮಾರಂಭ ಡಿಸೆಂಬರ್ 1 ರಂದು.

ಮೂಡಂಬೈಲು ಸರಕಾರಿ ಪ್ರೌಢ ಶಾಲೆಯಲ್ಲಿ ಶತಮಾನೋತ್ಸವದ ವರ್ಷಾಚರಣೆಯ ಉದ್ಘಾಟನಾ ಸಮಾರಂಭ ಡಿಸೆಂಬರ್ 1 ರಂದು.
ಮಂಜೇಶ್ವರ: 2024 - 25 ನೇ ಸಾಲಿನಲ್ಲಿ ಮೂಡಂಬೈಲು ಸರಕಾರಿ ಪ್ರೌಢ ಶಾಲೆಯಲ್ಲಿ ಶತಮಾನೋತ್ಸವವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲು ತೀರ್ಮಾನಿಸಲಾಗಿದ್ದು, ವರ್ಷಾಚರಣೆಯ ಉದ್ಘಾಟನಾ ಸಮಾರಂಭ ಡಿಸೆಂಬರ್ 1 ರಂದು ಭಾನುವಾರ ಬೆಳಗ್ಗೆ 10.30 ಕ್ಕೆ ಶಾಲಾ ಪ್ರಾಂಗಣದಲ್ಲಿ ನಡೆಯಲಿದೆ.
ಸಾಮಾಜಿಕ ಕಾರ್ಯಕರ್ತ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಮಿಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಂದರಿ ಆರ್. ಶೆಟ್ಟಿ ಅಧ್ಯಕ್ಷತೆ ವಹಿಸಲಿರುವರು. ಕಾಸರಗೋಡು ಸರಕಾರಿ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರತ್ನಾಕರ ಮಲ್ಲಮೂಲೆ ಮುಖ್ಯ ಅತಿಥಿಗಳಾಗಿರುವರು. ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ ಕೆ. ಪಾವೂರು, ಮೀಂಜ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯರಾಮ ಬಲ್ಲಂಗುಡೇಲು, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ ಶ್ರೀಮತಿ ಅಶ್ವಿನಿ ಎಂ.ಎಲ್, ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ವಿ, ಮಂಜೇಶ್ವರ ಸಹಾಯಕ ಶಿಕ್ಷಣಾಧಿಕಾರಿ ರಾಜಗೋಪಾಲ, ಮಂಜೇಶ್ವರ ಬ್ಲಾಕ್ ಯೋಜನಾ ಸಂಯೋಜಕ ಜಾಯ್ ಜಿ, ಶಾಲಾ ಬೆಂಬಲ ಸಮಿತಿ ಅಧ್ಯಕ್ಷ ಶಿವರಾಮ ಪದಕಣ್ಣಾಯ ಶುಭಾಶಂಸಣೆಗೈಯಲಿರುವರು. ರಕ್ಷಕ - ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ಲಾ ಪಜಿಂಗಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮ್ ಪ್ರಕಾಶ್ ಆಳ್ವ, ಮಾತೆಯರ ಸಂಘದ ಅಧ್ಯಕ್ಷ ಶ್ರೀಮತಿ ಸುಮಿತಾ ಎ.ಎಸ್, ಶಾಲ ಮುಖ್ಯೋಪಾಧ್ಯಾಯ ಜಾರ್ಜ್ ಕ್ರಾಸ್ತ ಸಿ.ಎಚ್, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ನ್ಯಾಯವಾದಿ ಎಂ. ದಾಮೋದರ ಶೆಟ್ಟಿ, ಉಪಸ್ಥಿತರಿರುವರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.
ಈ ಬಗ್ಗೆ ಶಾಲಾ ಶತಮಾನೋತ್ಸವ ಸಮಿತಿ ಸಭೆ ಸೇರಿ, ಡಿಸಂಬರ್ 1 ರಂದು ನಡೆಯಲಿರುವ ಶತಮಾನೋತ್ಸವ ಉದ್ಘಾಟನಾ ಸಮಾರಂಭ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಬ್ಯಾನರ್, ರಶೀದಿ, ಲೋಗೋ ಕುರಿತು ಚರ್ಚಿಸಿ, ಆಮಂತ್ರಣ ಪತ್ರಿಕೆಯನ್ನು ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದ ವಿವರ ಈ ಕೆಳಗಿನಂತಿದೆ.👇

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.