Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಹಿಂದೂ ಪರ ಸಂಘಟನೆಯ ಸಕ್ರೀಯ ಕಾರ್ಯಕರ್ತ, ಬಿಜೆಪಿ ಕುಂಬಳೆ ಮಂಡಲ ಕಾರ್ಯದರ್ಶಿ ಧನ್ ರಾಜ್ ಬೀಟಿಗದ್ದೆ (44) ರಸ್ತೆ ಅಪಘಾತದಲ್ಲಿ ಮೃತ್ಯು.

ಹಿಂದೂ ಪರ ಸಂಘಟನೆಯ ಸಕ್ರೀಯ ಕಾರ್ಯಕರ್ತ, ಬಿಜೆಪಿ ಕುಂಬಳೆ ಮಂಡಲ ಕಾರ್ಯದರ್ಶಿ ಧನ್ ರಾಜ್ ಬೀಟಿಗದ್ದೆ (44) ರಸ್ತೆ ಅಪಘಾತದಲ್ಲಿ ಮೃತ್ಯು.
ಉಪ್ಪಳ: ಪ್ರತಾಪನಗರ ಬೀಟಿಗದ್ದೆ ನಿವಾಸಿ, ಬಿಜೆಪಿ ಕುಂಬಳೆ ಮಂಡಲ ಕಾರ್ಯದರ್ಶಿ, ಪ್ರತಾಪನಗರ ಜೈ ಹನುಮಾನ್ ಫ್ರೆಂಡ್ಸ್ ಕ್ಲಬ್ ನ ಸ್ಥಾಪಕರಾದ, ಹಿಂದೂ ಪರ ಸಂಘಟನೆಗಳಲ್ಲಿ ಸಕ್ರಿಯರಾಗಿ ಕಾರ್ಯನಿರ್ವಹಿಸುತ್ತಿರುವ ಧನ್ ರಾಜ್ ಪೂಜಾರಿ (44) ಇಂದು ಅಪರಾಹ್ನ ಬಂದ್ಯೋಡ್ ಸಿರಿಯಾದಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ಕೇರಳ ಸಾರಿಗೆ ನಿಗಮದಲ್ಲಿ ಅರೆಕಾಲಿಕ ನಿರ್ವಾಹಕರಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಬಳಿಕ ಊರಿನಲ್ಲಿ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದರು. ಕುಂಬಳೆಯಿಂದ ತನ್ನ ಮನೆಗೆ ಸ್ಕ್ಕೂಟರ್ ನಲ್ಲಿ ಬರುತ್ತಿರುವ ವೇಳೆ ರಾಷ್ಟ್ರೀಯ ಹೆದ್ದಾರಿ 66 ಸಿರಿಯಾ ತಲುಪಿದಾಗ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಧನ್ ರಾಜ್ ರನ್ನು ಕೂಡಲೇ ಬಂದ್ಯೋಡ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ನಿಧನರಾಗಿದ್ದಾರೆ. ಇದೀಗ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಅವಿವಾಹಿತರಾಗಿದ್ದು, ದಿ. ಲೋಕನಾಥ ಪೂಜಾರಿ - ಕಮಲ ದಂಪತಿಗಳ ಪುತ್ರನಾಗಿದ್ದಾರೆ. ಸಹೋದರರಾದ: ಕಿಶೋರ್ ಕುಮಾರ್ (ಜಪಾನ್), ಜಗದೀಶ್ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.