Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಧರ್ಮದ ಚೌಕಟ್ಟಿನಲ್ಲಿ ಬದುಕಿನ ಔನ್ನತ್ಯ ನಿಂತಿದೆ. ಬ್ರಹ್ಮಕಲಶದಂತಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಗುವುದು ಬದುಕಿನಲ್ಲಿ ಸಿಗುವ ಅಪರೂಪದ ಅವಕಾಶ. - ಮೋಹನ್ ಶೆಟ್ಟಿ ತೂಮಿನಾಡು

ಧರ್ಮದ ಚೌಕಟ್ಟಿನಲ್ಲಿ ಬದುಕಿನ ಔನ್ನತ್ಯ ನಿಂತಿದೆ. ಬ್ರಹ್ಮಕಲಶದಂತಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಗುವುದು ಬದುಕಿನಲ್ಲಿ ಸಿಗುವ ಅಪರೂಪದ ಅವಕಾಶ. - ಮೋಹನ್ ಶೆಟ್ಟಿ ತೂಮಿನಾಡು.
ಮಂಜೇಶ್ವರ: ಧರ್ಮದ ಚೌಕಟ್ಟಿನಲ್ಲಿ ಬದುಕಿನ ಔನ್ನತ್ಯ ನಿಂತಿದೆ. ಬ್ರಹ್ಮಕಲಶದಂತಹ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಗುವುದು ಬದುಕಿನಲ್ಲಿ ಸಿಗುವ ಅಪರೂಪದ ಅವಕಾಶ ಎಂದು ಕೀರ್ತೇಶ್ವರ ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಿತಿಯ ಗೌರವಾದ್ಯಕ್ಷರಾದ ಮೋಹನ್ ಶೆಟ್ಟಿ ತೂಮಿನಾಡು ನುಡಿದರು.
ಅವರು ನಿನ್ನೆ ಬೆಳಗ್ಗೆ ಮಂಜೇಶ್ವರ ಬಳಿಯ ಕೀರ್ತೇಶ್ವರ ಶ್ರೀ ಸದಾಶಿವ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ದೇವಸ್ಥಾನದ ಜೀರ್ಣೋದ್ಧಾರದ ಕಾರ್ಯಗಳು ಬಿರುಸಿನಿಂದ ನಡೆಯುತ್ತಿದ್ದು, ಕ್ಷೇತ್ರದ ಜೀರ್ಣೋದ್ಧಾರದ ಕಾರ್ಯಗಳಲ್ಲಿ ಹಾಗೂ ಮುಂದೆ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳಲ್ಲಿ ಪ್ರತಿಯೊಬ್ಬರೂ ತಮ್ಮ ಕರ್ತವ್ಯ ಎಂಬಂತೆ ಸೇವೆ ನೀಡಬೇಕಾಗಿದೆ ಎಂದರು.
ಕ್ಷೇತ್ರದ ಪ್ರಧಾನ ಅರ್ಚಕರಾದ ರವೀಶ್ ಭಟ್ ಕಾಸರಗೋಡು ದೇವರ ಸಾನಿಧ್ಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕ್ಷೇತ್ರದ ಆಡಳಿತ ಮೋಕ್ತೇಸರರಾದ ವಿಶ್ವನಾಥ ಪೊಯ್ಯಕಂಡ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಸಮಿತಿಯ ಅಧ್ಯಕ್ಷರಾದ ತುಕರಾಮ್ ಕುಂಬ್ಳೆ, ಪ್ರಭಾರ ಅಧ್ಯಕ್ಷರಾದ ಹರಿಶ್ಚಂದ್ರ ಮಂಜೇಶ್ವರ, ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ದಯಾನಂದ ಬಂಗೇರ, ಸುನೀಲ್ ಗುರಿಕಾರರು, ಅಖಿಲ ಕರ್ನಾಟಕ ಗಾಣಿಗ ಸಂಘದ ನಿರ್ದೇಶಕರಾದ ಭಾಸ್ಕರ್ ಎಡಪದವು, ಕನಿಲ ಶ್ರೀ ಭಗವತಿ ಕ್ಷೇತ್ರದ ಭರಣ ಸಮಿತಿಯ ಸೋಮಶೇಖರ್ ಎಂ.ಎನ್, ಧಾರ್ಮಿಕ ಮುಂದಾಳು ಹರೀಶ್ ಶೆಟ್ಟಿ ಮಾಡ ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳಾದ ಉದಯಕುಮಾರ್ ಆನೆಬಾಗಿಲು ಸ್ವಾಗತಿಸಿ, ನಿರೂಪಿಸಿ, ಪ್ರದೀಶ್ ಅಂಜರೆ ವಂದಿಸಿದರು. ಶ್ರೀ ಕೀರ್ತೇಶ್ವರ ಸದಾಶಿವ ದೇವರ ಹಾಗೂ ಪರಿವಾರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು, ಇದೇ ಬರುವ ಮಾರ್ಚ್ 01 ರಿಂದ ಮೊದಲ್ಗೊಂಡು 08 ರ ತನಕ ವಿವಿಧ ವೈದಿಕ, ಧಾರ್ಮಿಕ , ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿಂದ ಜರುಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.