Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ತಲಪಾಡಿ ಕೆ.ಸಿ ರೋಡ್ ನ "ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌" ನಲ್ಲಿ ಹಾಡಹಗಲೇ ಬಂದೂಕು ತೋರಿಸಿ ದರೋಡೆ.

ತಲಪಾಡಿ ಕೆ.ಸಿ ರೋಡ್ ನ "ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌" ನಲ್ಲಿ ಹಾಡಹಗಲೇ ಬಂದೂಕು ತೋರಿಸಿ ದರೋಡೆ.
ತಲಪಾಡಿ: ಬೀದರ್ ನಲ್ಲಿ ನಿನ್ನೆ ನಡೆದ ಎಟಿಎಂ ದರೋಡೆ ಬಳಿಕ ದಕ್ಷಣ ಕನ್ನಡ ಜಿಲ್ಲೆಯ ಮಂಗಳೂರಿನ ಉಳ್ಳಾಲದ ತಲಪಾಡಿ ಬಳಿಯ ಕೆ.ಸಿ ರೋಡಿನಲ್ಲೂ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಲಾಗಿದೆ. ಕೆಸಿ ರೋಡ್‌ನ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ನಡೆದಿದೆ. ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು ದರೋಡೆ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಮಂಗಳೂರಿನಲ್ಲಿ ಸಿ.ಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ ಟಾರ್ಗೆಟ್ ಮಾಡಿಕೊಂಡು ದರೋಡೆಗೆ ಸಂಚು ರೂಪಿಸಿದ್ದ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು, ಶ್ವಾನದಳ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಬ್ಯಾಂಕ್‌ಗೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇದು ಯುಟಿ ಖಾದ‌ರ್ ಅವರ ವಿಧಾನಸಭಾ ಕ್ಷೇತ್ರವಾಗಿದೆ. ಬ್ಯಾಂಕ್ ದರೋಡೆ ವಿಚಾರವಾಗಿ ಮಂಗಳೂರಿನಲ್ಲಿ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯಿಸಿದ್ದು, ಕೆ.ಸಿ ರೋಡ್‌ನ ಕೋಟೆಕಾರು ಬ್ಯಾಂಕ್‌ನಲ್ಲಿ ಚಿನ್ನಾಭರಣ, ನಗದು ದರೋಡೆಯಾಗಿದೆ. ತಲ್ವಾರ್, ಗನ್‌ನಿಂದ ಬೆದರಿಸಿ ಬ್ಯಾಂಕ್ ದರೋಡೆ ಮಾಡಿದ ಮಾಹಿತಿ ದೊರೆತಿದೆ. ಜನಸಂದಣಿ ಕಡಿಮೆ ಇರುವ ಸಮಯದಲ್ಲೇ ದರೋಡೆ ನಡೆಸಿದ್ದಾರೆ. ಆರೋಪಿಗಳ ಬಂಧಿಸಲು ವಿಶೇಷ ತಂಡ ರಚನೆ ಮಾಡಲು ಸೂಚನೆ ನೀಡಲಾಗಿದೆ ಎಂದಿದ್ದಾರೆ. ಜಿಲ್ಲಾಡಳಿತದಿಂದ ಪೊಲೀಸರಿಗೆ ಸಂಪೂರ್ಣ ಸಹಕಾರ ಕೊಡುತ್ತೇವೆ. ಪೊಲೀಸರು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಖಾದರ್ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.