Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಕುಳೂರು ಶಾಲೆಯಲ್ಲಿ ಸಂಭ್ರಮದ ಶಾಲಾ ವಾರ್ಷಿಕೋತ್ಸವ.

ಕುಳೂರು ಶಾಲೆಯಲ್ಲಿ ಸಂಭ್ರಮದ ಶಾಲಾ ವಾರ್ಷಿಕೋತ್ಸವ :
ಮಂಜೇಶ್ವರ : ಕಳೆದ ವರ್ಷ ಶತಮಾನೋತ್ಸವವನ್ನು ಆಚರಿಸಿ ಇದೀಗ 101 ನೇ‌ ವರ್ಷದಲ್ಲಿ ಮುನ್ನಡೆಯುತ್ತಿರುವ ಕುಳೂರು ಶಾಲೆಯಲ್ಲಿ ಈ ವರ್ಷದ ಶಾಲಾ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಆ ಪ್ರಯುಕ್ತ ಶಾಲಾ ವಾರ್ಷಿಕೋತ್ಸವಕ್ಕೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲರವರು ಧ್ವಜಾರೋಹಣಗೈಯುವ ಮೂಲಕ ಚಾಲನೆ‌ ನೀಡಿದರು. ಬಳಿಕ ಶಾಲಾ ಮಕ್ಕಳಿಗೆ ಮನೋರಂಜನಾ ಆಟಗಳನ್ನು ಏರ್ಪಡಿಸಲಾಯಿತು‌. ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಸಭಾ ಕಾರ್ಯಕ್ರಮದಲ್ಲಿ ಉದ್ಘಾಟನೆಯನ್ನು ಮೀಂಜ ಪಂಚಾಯತಿನ ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿಯವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲರವರು ವಹಿಸಿದ್ದರು‌. ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಮೀಂಜ ಪಂಚಾಯತಿನ ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಸ್ವತಿ ಕೆ, ವಾರ್ಡ್ ಸದಸ್ಯರಾದ ಜನಾರ್ಧನ ಪೂಜಾರಿ ಕುಳೂರು ಹಾಗೂ ಮೀಂಜ ಪಿ.ಇ.ಸಿ.‌ ಸೆಕ್ರಟರಿ ಹಾಗೂ ಮಜಿಬೈಲು ಶಾಲೆಯ ಮುಖ್ಯ ಶಿಕ್ಷಕರಾದ ಸುರೇಶ್ ಬಂಗೇರ ಆಗಮಿಸಿದ್ದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಈ ವರ್ಷ ಸೇವೆಯಿಂದ ನಿವೃತ್ತರಾಗುತ್ತಿರುವ ಕಾಸರಗೋಡು ಜಿಲ್ಲಾ ಶಿಕ್ಷಣಾಧಿಕಾರಿ ದಿನೇಶ್ ವಿ ಹಾಗೂ ಮಂಜೇಶ್ವರ ಉಪಜಿಲ್ಲಾ ಸಹಾಯಕ ಶಿಕ್ಷಣಾಧಿಕಾರಿ ರಾಜಗೋಪಾಲ ಎನ್ ರವರಿಗೆ ಶಾಲಾ ಪರವಾಗಿ ಗೌರವಾರ್ಪಣೆ ನೀಡಲಾಯಿತು. ಜೊತೆಗೆ ಭಾರತದ ಥ್ರೋಬಾಲ್ ತಂಡಕ್ಕೆ ಆಯ್ಕೆಯಾಗಿ ಇಂಡೋ-ನೇಪಾಳ ಚಾಂಪಿಯನ್ ಶಿಪ್ ನಲ್ಲಿ ಆಡಿ ಗೆದ್ದಂತಹ ಅಂತರಾಷ್ಟ್ರೀಯ ಥ್ರೋಬಾಲ್ ಪಟು, ಕುಳೂರು ಶಾಲಾ ಹಳೆ ವಿದ್ಯಾರ್ಥಿ ಬಸವರಾಜ್ ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಉಷಾ ಆದರ್ಶನಗರ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಬಾಲಕೃಷ್ಣ ಶೆಟ್ಟಿ ಪೊಯ್ಯೇಲು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ನಾರಾಯಣ ನೈಕ್ ನಡುಹಿತ್ಲು, ಹಳೆ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಸುಧಾಕರ ಶೆಟ್ಟಿ ಎಲಿಯಾಣ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಅನುಪಮ ಚಿನಾಲ ಉಪಸ್ಥಿತರಿದ್ದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ಶೇಖ್ ಅಬ್ದುಲ್‌ ಮಜೀದ್ ಚಾರ್ಲ ರವರು ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ. ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮವನ್ನು ನಿರೂಪಿಸಿದರು. ಬಳಿಕ ಶಾಲಾ ಮಕ್ಕಳು, ಸ್ಥಳೀಯ ಅಂಗನವಾಡಿ ಪುಟಾಣಿಗಳು ಹಾಗೂ ಹಳೆ‌ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಾಲಾ ಮಕ್ಕಳಿಂದ ಕಿರು ನಾಟಕ ಪ್ರದರ್ಶನವು ನಡೆಯಿತು. ಶಾಲಾ ಹಳೆ ವಿದ್ಯಾರ್ಥಿ ಸಂಘ ಹಾಗೂ ಶಾಲಾ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಶಾಲಾ ಶಿಕ್ಷಕ ವೃಂದ ಸಹಕರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.