Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ರಾಷ್ಟ್ರೀಯ ಹೆದ್ದಾರಿ ಮಂಜೇಶ್ವರ ವಾಮಂಜೂರು ಚೆಕ್ ಪೋಸ್ಟ್ ಬಳಿ ಭೀಕರ ರಸ್ತೆ ಅಪಘಾತ. ಮೂರು ಮಂದಿ ಸಾವು. ಓರ್ವನಿಗೆ ಗಾಯ.

ರಾಷ್ಟ್ರೀಯ ಹೆದ್ದಾರಿ ಮಂಜೇಶ್ವರ ವಾಮಂಜೂರು ಚೆಕ್ ಪೋಸ್ಟ್ ಬಳಿ ಭೀಕರ ರಸ್ತೆ ಅಪಘಾತ. ಮೂರು ಮಂದಿ ಸಾವು. ಓರ್ವನಿಗೆ ಗಾಯ.
ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ವಾಮಂಜೂರು ಚೆಕ್ ಪೋಸ್ಟ್ ನ ಸೇತುವೆಯ ಬಳಿ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಇನ್ನೋರ್ವ ಅಪಘಾತದಲ್ಲಿ ಗಾಯಗೊಂಡಿದ್ದಾನೆ. ಘಟನೆಯಲ್ಲಿ ಕಾರಿನ ಮುಂದಿನ ಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು, ವಾಹನದ ಬಿಡಿ ಭಾಗಗಳು ಎಲ್ಲೆಂದರಲ್ಲಿ ರಸ್ತೆಯಲ್ಲಿ ಹರಡಿ ಬಿದ್ದಿದ್ದೆ. ಉಪ್ಪಳ ಬಳಿಯ ಪೈವಳಿಕೆ ಭಾಗದ ಬಾಯಿಕಟ್ಟೆ ನಿವಾಸಿಗಳಾದ ಜನಾರ್ಧನ, ಪುತ್ರ ವರುಣ್ ಹಾಗೂ ಕಿಶನ್ ಸಾವನ್ನಪ್ಪಿದ ದುರ್ದೈವಿಗಳು. ಒಂದೇ ಕುಟುಂಬದವರು ಎಂಬ ಮಾಹಿತಿ ತಿಳಿದು ಬಂದಿದೆ. ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಅಪಘಾತದಲ್ಲಿ ಮೃತಪಟ್ಟವರನ್ನು ಶವಾಗಾರಕ್ಕೆ ಸಾಗಿಸಿದ್ದಾರೆ. ಗಾಯಗೊಂಡ ರತ್ನ ಎಂಬವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಜೇಶ್ವರ ಪೊಲೀಸರು ಘಟನೆ ಸ್ಥಳಕ್ಕೆ ಆಗಮಿಸಿ, ತನಿಖೆ ನಡೆಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.