ಕಾರು ಡಿಕ್ಕಿ ಹೊಡೆದು ಕೂಲಿ ಕಾರ್ಮಿಕ ಮೃತ್ಯು.
ಮಾರ್ಚ್ 21, 2025
0
ಕಾರು ಡಿಕ್ಕಿ ಹೊಡೆದು ಕೂಲಿ ಕಾರ್ಮಿಕ ಮೃತ್ಯು.
ಮಂಜೇಶ್ವರ: ಬಸ್ಸಿಳಿದು ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಜೇಶ್ವರ ರಾಗಂ ಜಂಕ್ಷನ್ ನಲ್ಲಿ ನಡೆದಿದೆ. ಘಟನೆಯಲ್ಲಿ ಮೂಲತಃ ಮೀಯಪದವು ಬಳಿಯ ಕುಳಬೈಲು ನಿವಾಸಿ, ಇದೀಗ ಮಂಜೇಶ್ವರ ಕೆದುಂಬಾಡಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಕೂಲಿ ಕಾರ್ಮಿಕ ಜಯಂತ (49) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಇವರು ನಿನ್ನ ಸಂಜೆ ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ಸಿಳಿದು ರಸ್ತೆ ದಾಟುತ್ತಿರುವ ವೇಳೆ ಇವರಿಗೆ ಕಾಸರಗೋಡು ಭಾಗದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಇವರನ್ನ ಸ್ಥಳೀಯರು ಮಂಗಳೂರು ಆಸ್ಪತ್ರೆಗೆ ದಾಖಲಿಸುವ ಹಾದಿಮಧ್ಯೆ ಮೃತಪಟ್ಟಿದ್ದಾರೆ. ಮೃತರು ತಾಯಿ, ಪತ್ನಿ ಸವಿತಾ, ಮೂವರು ಮಕ್ಕಳು, ಏಕ ಸಹೋದರಿ ಹಾಗೂ ಅಪಾರ ಬಂಧು - ಬಳಗವನ್ನು ಅಗಲಿದ್ದಾರೆ. ಘಟನೆ ಸಂಬಂಧ ಡಿಕ್ಕಿ ಹೊಡೆದ ಕಾರನ್ನು ಮಂಜೇಶ್ವರ ಪೊಲೀಸರು ತಮ್ಮ ಕಸ್ಟಡಿಗೆ ತೆಗೆದಿದ್ದು ಕೇಸು ದಾಖಲಿಸಿದ್ದಾರೆ.

