Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಅಪಘಾತದಿಂದ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ (37) ನಿಧನ.

ಅಪಘಾತದಿಂದ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ (37) ನಿಧನ.
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ ಹಾಗೂ ಈಟಿವಿ ಭಾರತ್ ಉಡುಪಿ ಜಿಲ್ಲಾ ವರದಿಗಾರ ಸಂದೀಪ್ ಪೂಜಾರಿ(37) ಎ.20 ರಂದು ಬೆಳಗ್ಗೆ ನಿಧನರಾದರು. ಇವರು ಸಕಲೇಶಪುರ ಸಮೀಪದ ಬಾಳ್ಳುಪೇಟೆ ಎಂಬಲ್ಲಿ ಮಾ.29 ರಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪಘಾತದಿಂದ ಬೆನ್ನು ಹುರಿ(ಸ್ಟೈನಲ್‌ ಕಾಡ್‌)ಗೆ ತೀವ್ರ ಪೆಟ್ಟಾಗಿ ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಾಪು ತಾಲೂಕಿನ ಶಿರ್ವ ನಿವಾಸಿಯಾಗಿರುವ ಇವರು, ಮಾಧ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪಬ್ಲಿಕ್ ಟಿವಿ, ಸ್ಪಂದನಾ ಸುದ್ದಿ ವಾಹಿನಿಯಲ್ಲಿ ಕ್ಯಾಮೆರಮೆನ್, ಬಿ ಟಿವಿಯ ಕ್ಯಾಮೆರಮೆನ್ ಹಾಗೂ ವರದಿಗಾರರಾಗಿ ಇವರು ಸೇವೆ ಸಲ್ಲಿಸಿದ್ದು ಪ್ರಸ್ತುತ ಈಟಿವಿ ಭಾರತ್ ವಾಹಿನಿಯಲ್ಲಿ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ ಲೈವ್ ವಾಹಿನಿಗಳಾದ ಸಿ4ಯು, ಪ್ರೈಮ್ ಕಾರ್ಲದಲ್ಲಿ ತಂತ್ರಜ್ಞರಾಗಿ ಇವರು ಕಾರ್ಯನಿರ್ವಹಿಸುತ್ತಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.