Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಮುಲ್ಕಿಯ ಆಟೋ ಚಾಲಕನ ಕೊಲೆಗೈದು ಕುಂಜತ್ತೂರು ಪದವು ಬಳಿಯ ಬಾವಿಗೆಸೆದ ಪ್ರಕರಣ. ಸುರತ್ಕಲ್ ನಿವಾಸಿ ಅಭಿಷೇಕ್ ಶೆಟ್ಟಿ (40) ಬಂಧನ.

ಮುಲ್ಕಿಯ ಆಟೋ ಚಾಲಕನ ಕೊಲೆಗೈದು ಕುಂಜತ್ತೂರು ಪದವು ಬಳಿಯ ಬಾವಿಗೆಸೆದ ಪ್ರಕರಣ. ಸುರತ್ಕಲ್ ನಿವಾಸಿ ಅಭಿಷೇಕ್ ಶೆಟ್ಟಿ (40) ಬಂಧನ.
ಮಂಜೇಶ್ವರ: ಮುಲ್ಕಿ ಕೊಲ್ನಾಡು ನಿವಾಸಿ,ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಕೊಲೆಗೈದು ಮಂಜೇಶ್ವರ ಸಮೀಪ ಬಾವಿಗೆಸೆದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಸುರತ್ಕಲ್ ನಿವಾಸಿ ಅಭಿಷೇಕ್ ಶೆಟ್ಟಿ (40) ಬಂಧಿತ ಆರೋಪಿ. ಪೂರ್ವ ದ್ವೇಷವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಕೊಲೆ ಆರೋಪಿ ಅಭಿಷೇಕ್ ಶೆಟ್ಟಿ ಸುರತ್ಕಲ್ ನಿವಾಸಿಯಾಗಿದ್ದು, ಮಂಗಳೂರಿನ ಶಾಲೆಯೊಂದರ ಬಸ್ಸು ಚಾಲಕನಾಗಿದ್ದನು. ಈ ವೇಳೆ ದಾರಿ ಬಿಡದ ಘಟನೆ ನಡೆದಿದ್ದು ಈ ದ್ವೇಷವೇ ಕೊಲೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಬುದವಾರ ರಾತ್ರಿಯಿಂದ ನಾಪತ್ತೆಯಾಗಿದ್ದ ಮುಹಮ್ಮದ್ ಶರೀಫ್‌ ಅವರ ಮೃತದೇಹ ಗುರುವಾರ ರಾತ್ರಿ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿತ್ತು. ಅವರನ್ನು ಕೊಲೆಗೈದು ಬಾವಿಗೆ ಎಸೆದಿರುವುದು ಪೋಸ್ಟ್ ಮಾರ್ಟಂ ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಮಂಜೇಶ್ವರ ಠಾಣಾ ಪೊಲೀಸರಿಗೆ ಮಂಗಳೂರಿನಿಂದ ಮೂವರು ಶರೀಫ್ ಅವರ ರಿಕ್ಷಾವನ್ನು ಬಾಡಿಗೆಗೆ ಪಡೆದು ತೆರಳಿದ್ದರು ಎಂಬ ಮಾಹಿತಿ ಲಭಿಸಿತ್ತು. ಶರೀಫ್‌ ಅವರ ಆಟೋ ರಿಕ್ಷಾ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಮಂಜೇಶ್ವರ ಕಡೆಗೆ ಬರುತ್ತಿರುವುದು ತಲಪಾಡಿ ಟೋಲ್ ಗೇಟಿನ ಸಿಸಿಟಿವಿ ಕ್ಯಾಮರಾದಲ್ಲೂ ಸೆರೆಯಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.