ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ.
ಮೇ 13, 2025
0
ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ.
ಮಂಜೇಶ್ವರ: ಪವಿತ್ರ ಹಜ್ ಯಾತ್ರೆಗೆ ತೆರಳುತ್ತಿರುವ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಮಂಜೇಶ್ವರ 15ನೇ ವಾರ್ಡು ಸಮಿತಿಯ ಅಧ್ಯಕ್ಷ ಸಿದ್ದೀಕ್ ಮಂತ್ರಿ ಯವರನ್ನು ಮಂಜೇಶ್ವರ ಮಂಡಲ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಆತ್ಮೀಯವಾಗಿ ಬೀಳ್ಕೊಡಲಾಯಿತು. ಮಂಡಲ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹನೀಫ್ ಪಡಿಂಞಾರ್ ಅವರ ಅಧ್ಯಕ್ಷತೆಯಲ್ಲಿ ಮಾಜೀ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಅವರು ಸ್ಮರಣಿಕೆಯನ್ನು ನೀಡಿ ಗೌರವಿಸಿದರು. ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಅಹಮದ್ ಮನ್ಸೂರ್ ಬಿ.ಎಂ, ರಂಜಿತ್ ಮಂಜೇಶ್ವರ, ರಫೀಕ್ ಭದ್ರಾವತಿ, ಅಮ್ಮಿ ಕ್ರೌನ್, ಶಾಝ್, ರಫೀಕ್ ಶಾನ್, ಮುಂತಾದವರು ಉಪಸ್ಥಿತರಿದ್ದರು.

