Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವಿಶ್ವಾವಸು ಸಂವತ್ಸರದ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ.

ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರ ವಿಶ್ವಾವಸು ಸಂವತ್ಸರದ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ.
ಉಡುಪಿ: ಕಟಪಾಡಿ ಪಡುಕುತ್ಯಾರಿನ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ವಿಶ್ವಾವಸು ಸಂವತ್ಸರದ 21 ನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆಯು ಜುಲೈ 10 ರಿಂದ ಸೆಪ್ಟೆಂಬರ್ 7 ರ ತನಕ ಶ್ರೀಮಠದಲ್ಲಿ ಸಂಪನ್ನಗೊಳ್ಳಲಿದೆ. ಚಾತುರ್ಮಾಸ್ಯ ವ್ರತಾಚರಣೆಯ ಆಮಂತ್ರಣ ಪತ್ರಿಕೆಯನ್ನು ಪತ್ರಿಕೆಯನ್ನು ಇಂದು ಶ್ರೀಮಠದಲ್ಲಿ ಜಗದ್ಗುರುಗಳವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿ ಪದಾಧಿಕಾರಿಗಳಾದ ಪ್ರತಿಷ್ಠಾನದ ಅಧ್ಯಕ್ಷ ಒಡೆಯರಹೋಬಳಿ ಶ್ರೀಧರ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಲೋಕೇಶ್ ಎಂ ಬಿ ಆಚಾರ್ ಕಂಬಾರ್, ಉಪಾಧ್ಯಕ್ಷರಾದ ಕೆ.ಪ್ರಭಾಕರ ಆಚಾರ್ಯ ಕೋಟೆಕಾರ್, ಕಾಡಬೆಟ್ಟು ನಾಗರಾಜ ಆಚಾರ್ಯ, ವಿವಿಧ ಸಮಿತಿಗಳ ಪ್ರಮುಖರಾದ ಬೆಳುವಾಯಿ ಸುಂದರ ಆಚಾರ್ಯ ಮಂಗಳೂರು, ಸಂಧ್ಯಾ ಲಕ್ಷ್ಮಣ ಆಚಾರ್ಯ ಉಡುಪಿ, ಕೆ.ಎಂ ಗಂಗಾಧರ ಆಚಾರ್ಯ ಕೊಂಡೆವೂರು, ಕೆ.ರಾಘವೇಂದ್ರ ಆಚಾರ್ಯ ಕಾಡಬೆಟ್ಟು, ಕೆ.ಎಂ ಮಧುಸೂದನ ಕಾಸರಗೋಡು, ವಿಠಲ ಆಚಾರ್ಯ ಎಲ್ಲೂರು, ಲೋಲಾಕ್ಷ ಶರ್ಮಾ ಪಡುಕುತ್ಯಾರು, ಗಣೇಶ್ ಆಚಾರ್ಯ ಕೋಟ, ಕೇಶವ ಶರ್ಮಾ ಇರುವೈಲು, ದಯಾನಂದ ಆಚಾರ್ಯ ಕೆಳಾರ್ಕಳಬೆಟ್ಟು , ಮೌನೇಶ ಶರ್ಮಾ ಪಡುಕುತ್ಯಾರು, ನವೀನ್ ಆಚಾರ್ಯ ಪಣಿಯೂರು ಉಪಸ್ಥಿತರಿದ್ದರು. ಚಾತುರ್ಮಾಸ್ಯ ವ್ರತ ಸಂಕಲ್ಪ ಪೂರ್ವಭಾವಿ ಕ್ಷೇತ್ರ ಸಂದರ್ಶನವು ನಾಳೆ ಜೂನ್ 12 ಆನೆಗುಂದಿಯಿಂದ ಆರಂಭಗೊಳ್ಳಲಿದ್ದು ಜುಲೈ 6 ರಂದು ಕಾಞಂಗಾಡಿನಲ್ಲಿ ಕೊನೆಗೊಳ್ಳಲಿದೆ. ಚಾತುರ್ಮಸ್ಯ ವೃತಚಾರಣೆಯ ಕಾರ್ಯಕ್ರಮಗಳ ವಿವರ ಈ ಕೆಳಗಿನಂತಿದೆ.👇

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.