Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಕುಳೂರು ಶಾಲೆಯಲ್ಲಿ ವಾಚನಾ ದಿನಾಚರಣೆಯ ಉದ್ಘಾಟನೆ.

ಕುಳೂರು ಶಾಲೆಯಲ್ಲಿ ವಾಚನಾ ದಿನಾಚರಣೆಯ ಉದ್ಘಾಟನೆ.
ಮಂಜೇಶ್ವರ: ಕೇರಳದ ಗ್ರಂಥಶಾಲಾ ಪಿತಾಮಹ ಎಂದೇ ಕರೆಯಲ್ಪಡುವ ಪಿ.ಎನ್. ಪಣಿಕ್ಕರ್ ರವರ ಚರಮ ದಿನಾಚರಣೆಯನ್ನು ವಾಚನಾ ದಿನಾಚರಣೆಯನ್ನಾಗಿ ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಖ್ಯಾತ ನಿರೂಪಕ, ರಂಗ ನಿರ್ದೇಶಕರಾದ ಶಶಿಕುಮಾರ್ ಕುಳೂರು ರವರು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಯರಾಜ್ ಶೆಟ್ಟಿ ಚಾರ್ಲರವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹಳೆವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿ ಶೇಖ್ ಅಬ್ದುಲ್ ಮಜೀದ್ ಚಾರ್ಲ ರವರು ಉಪಸ್ಥಿತರಿದ್ದರು. ಶಶಿಕುಮಾರ್ ಕುಳೂರುರವರು ಶಾಲಾ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ನಡೆಸಿ ಮನರಂಜಿಸಿದರು. ವಾಚನಾ ವಾರಾಚರಣೆಗೆ ಚಾಲನೆಯನ್ನೂ ನೀಡಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಸೌಮ್ಯ ಪಿ. ಸ್ವಾಗತಿಸಿ, ಶಿಕ್ಷಕಿ ನಯನ ಎಂ. ವಂದಿಸಿದರು. ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು. ವಾಚನಾ ವಾರಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.