Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಜೂ.18 ರಂದು ಜೋಡುಕಲ್ಲಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಜನ್ಮದಿನಾಚರಣೆ. ಪ್ರೊ. ಎ. ಶ್ರೀನಾಥ್ ಅವರಿಗೆ "ಕಯ್ಯಾರ" ಪ್ರಶಸ್ತಿ.

ಜೂ.18 ರಂದು ಜೋಡುಕಲ್ಲಿನಲ್ಲಿ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಜನ್ಮದಿನಾಚರಣೆ. ಪ್ರೊ. ಎ. ಶ್ರೀನಾಥ್ ಅವರಿಗೆ "ಕಯ್ಯಾರ" ಪ್ರಶಸ್ತಿ.
ಕಾಸರಗೋಡು: ಕಾಸರಗೋಡು ಸರಕಾರಿ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ, ಜಾನಪದ ವಿದ್ವಾಂಸ, ಯಕ್ಷಗಾನ ಗೊಂಬೆಯಾಟ ಕಲಾವಿದ ಪ್ರೊ.ಎ.ಶ್ರೀನಾಥ್ ಕಾಸರಗೋಡು "ಕಯ್ಯಾರ" ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ, ಗಡಿ ನಾಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು ಕಲ್ಕೂರ ಪ್ರತಿಷ್ಠಾನ ಮಂಗಳೂರು, ಗ್ರೀನ್ ಸ್ಟಾರ್ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಕಯ್ಯಾರ್, 16 ನೇ ವಾರ್ಡ್ ಕಯ್ಯಾರ್ ಕುಟುಂಬ ಶ್ರೀ ಘಟಕಗಳ ಸಹಯೋಗದಲ್ಲಿ ಕಯ್ಯಾರ್ ಜೋಡುಕಲ್ಲು ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ಜೂ.18 ರಂದು ಬೆಳಗ್ಗೆ 9 ರಿಂದ ನಡೆಯುವ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಜನ್ಮದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಲಾಗುವುದು. ಕನ್ನಡ ಎಂ.ಎ.ಪದವೀಧರ, ಚಿಂತಕ, ವಾಗ್ಮಿ, ಸಂಘಟಕ, ಸಮಾಜ ಸೇವಕರೂ ಆದ ಶ್ರೀನಾಥ್, ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಳವಾದ ಜ್ಞಾನವುಳ್ಳ ಕಾಸರಗೋಡಿನ ಸಾಹಿತ್ಯಿಕ, ಸಾಂಸ್ಕೃತಿಕ, ಧಾರ್ಮಿಕ ಸಂಘಟನೆಯಲ್ಲಿ ಹೆಸರು ಪಡೆದಿದ್ದಾರೆ. ಮೂರು ದಶಕಗಳ ಕಾಲ ಕಾಸರಗೋಡು ಸರಕಾರಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಎನ್ನೆಸ್ಸೆಸ್ ಯೋಜನೆಯ ಶಿಬಿರ ನಿರ್ದೇಶಕರಾಗಿ, ಯೋಜನಾಧಿಕಾರಿಯಾಗಿ 15 ವರ್ಷಗಳ ಸಮರ್ಥವಾಗಿ ಮುನ್ನಡೆಸಿ, ಎನ್ನೆಸ್ಸೆಸ್ ಘಟಕಕ್ಕೆ ಭದ್ರ ಅಡಿಪಾಯ ಒದಗಿಸಿದ ಶ್ರೀನಾಥ್ ಅವರಿಗೆ ಎನ್ನೆಸ್ಸೆಸ್ ರಾಜ್ಯ ಪ್ರಶಸ್ತಿ ಒಲಿದಿದೆ. ಸರಕಾರಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸುತ್ಯರ್ಹ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಕೇರಳ ಸರಕಾರದ ಸಂಪೂರ್ಣ ಸಾಕ್ಷರತಾ ಯೋಜನೆಯ ಯೋಜನಾಧಿಕಾರಿಯಾಗಿ, ಕೇರಳ ರಾಜ್ಯದ ಪಠ್ಯಪುಸ್ತಕ ಸಮಿತಿಯ ಸಂಯೋಜಕ, ಸದಸ್ಯರಾಗಿ, ಕಣ್ಣೂರು ವಿವಿ ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷರಾಗಿ, ತುಳು ನಿಘಂಟು ರಚನಾ ಸಮಿತಿಯ ಸಹಾಯಕ ಸಂಯೋಜಕ, ಬಹುಭಾಷ ನಿಘಂಟು ರಚನೆಯಲ್ಲಿ ಉಪಸಂಪಾದಕರಾಗಿ, ಕೇರಳ ತುಳು ಅಕಾಡೆಮಿ ಸದಸ್ಯ, ಏಡ್ಸ್ ಜನಜಾಗೃತಿ ಯೋಜನೆಯ ನಿಧಿಜ್ಞ, ನೆಹರೂ ಯುವಕೇಂದ್ರ ಸಲಹಾ ಸಮಿತಿ ಸದಸ್ಯರಾಗಿ ಅನನ್ಯ ಸೇವೆ ಸಲ್ಲಿಸಿದ್ದಾರೆ. ಅನೇಕ ವೈಚಾರಿಕ, ಸಂಶೋಧನಾತ್ಮಕ ಲೇಖನಗಳನ್ನು ಬರೆದಿರುವ ಅವರು ನೂರಾರು ಕೃತಿಗಳಿಗೆ ಮುನ್ನುಡಿ, ಬೆನ್ನುಡಿ ಬರೆದಿದ್ದಾರೆ. ಸ್ಮರಣ ಸಂಚಿಕೆಗಳ ಸಂಪಾದಕರಾಗಿ ಸೇವೆಗೈದಿದ್ದಾರೆ. ಕವಿಗೋಷ್ಠಿ, ವಿಚಾರಗೋಷ್ಠಿಗಳಲ್ಲಿ ಭಾಗವಹಿಸಿದ್ದಲ್ಲದೆ, ಸಾಹಿತ್ಯಕ ಕಾರ್ಯಕ್ರಮಗಳನ್ನು ಸಂಘಟಿಸಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ನೀಡಿದ್ದಾರೆ. 2010ರಲ್ಲಿ ಅವರ ಅಭಿಮಾನಿಗಳು "ಶ್ರೀನಿಧಿ" ಎಂಬ ಅಭಿನಂದನೆ ಗ್ರಂಥ ಸಮರ್ಪಿಸಿದ್ದಾರೆ. ನೂರಾರು ಕಡೆ ಸನ್ಮಾನ, ಪ್ರಶಸ್ತಿ, ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.