Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ.

ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ.
ಮಂಗಳೂರು: ತೆಂಕು ತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67 ) ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾದರು. ಕಟೀಲು ಮೇಳದಲ್ಲಿ ಕಳೆದ ೨೦ ವರ್ಷಗಳಿಂದ ವೇಷಧಾರಿಯಾಗಿ, ೩ ನೇ ಮೇಳದ ಪ್ರಬಂಧಕರಾಗಿ ಸೇವೆ ಸಲ್ಲಿಸಿದ್ದರು. ಧರ್ಮಸ್ಥಳ, ಕರ್ನಾಟಕ, ಸಸಿಹಿತ್ಲು ಮೇಳಗಳಲ್ಲಿ ತುಳು - ಕನ್ನಡ ಪ್ರಸಂಗಗಳಲ್ಲಿ ಎಲ್ಲಾ ಸ್ವರೂಪದ ಪಾತ್ರಗಳನ್ನು ನಿರ್ವಹಿಸಿದ್ದರು. ವಿದ್ಯುನ್ಮತಿ ಕಲ್ಯಾಣ ಪ್ರಸಂಗ ಪುಸ್ತಕದಲ್ಲಿ ಮುಂಡಾಜೆ ಅವರ ಸ್ತ್ರೀ ವೇಷದ ಚಿತ್ರ ಮುಖ ಪುಟದಲ್ಲಿದ್ದು ಅವರ ವೇಷದ ಸರಣಿಯ ದಾಖಲಾತಿ ಒದಗಿಸುತ್ತದೆ. ಪುಂಡು, ರಾಜವೇಶ, ನಾಟಕೀಯ ವೇಷಗಳಲ್ಲಿ ನುರಿತ ಕಲಾವಿದರಾಗಿದ್ದರು. ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ 1.15 ಕ್ಕೆ ಕದ್ರಿ ರುದ್ರಭೂಮಿ ಯಲ್ಲಿ ಜರಗಲಿದೆ. ಅಂತ್ಯದರ್ಶನ ವ್ಯವಸ್ಥೆ : ಮಧ್ಯಾಹ್ನ 1ಕ್ಕೆ ಕದ್ರಿ ಮಲ್ಲಿಕಟ್ಟೆ ಮೈದಾನದಲ್ಲಿ ನಡೆಯಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.