Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

45 ನೇ ವರ್ಷದ ಮಂಜೇಶ್ವರ ಗಣೇಶೋತ್ಸವದಲ್ಲಿ ಪೂಜಿಸಲ್ಪಡುವ ಶ್ರೀ ಮಹಾಗಣಪತಿ ದೇವರ ವಿಗ್ರಹ ನಿರ್ಮಾಣಕ್ಕೆ ಮುಹೂರ್ತ.

45 ನೇ ವರ್ಷದ ಮಂಜೇಶ್ವರ ಗಣೇಶೋತ್ಸವದಲ್ಲಿ ಪೂಜಿಸಲ್ಪಡುವ ಶ್ರೀ ಮಹಾಗಣಪತಿ ದೇವರ ವಿಗ್ರಹ ಮುಹೂರ್ತ.
ಮಂಜೇಶ್ವರ: ಸಾರ್ವಜನಿಕ ಮಂಜೇಶ್ವರ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಜರಗಲಿರುವ 45 ನೇ ವರ್ಷದ ಸಾರ್ವಜನಿಕ ಮಂಜೇಶ್ವರ ಗಣೇಶೋತ್ಸವದಲ್ಲಿ ಪೂಜಿಸಲ್ಪಡುವ ಶ್ರೀ ಮಹಾಗಣಪತಿ ದೇವರ ವಿಗ್ರಹ ಮುಹೂರ್ತವು ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ವೈದಿಕ ವಿಧಿವಿದಾನಗಳೊಂದಿಗೆ ನಡೆಯಿತು.
ಕಾರ್ಯಕ್ರಮದಲ್ಲಿ ಸಮಿತಿಯ ಗೌರವಧ್ಯಕ್ಷರಾದ ಹೈಮೇಶ್ ಬಿ.ಎಂ, ಅಧ್ಯಕ್ಷರಾದ ಪದ್ಮನಾಭ ಕಡಪ್ಪರ, ಪ್ರಧಾನ ಕಾರ್ಯದರ್ಶಿ ಅವಿನಾಶ್ ಹೆಗ್ಡೆ ಮಂಜೇಶ್ವರ, ಕೋಶಾಧಿಕಾರಿ ನವೀನ್ ಅಡಪ್ಪ ಹೊಸಬೆಟ್ಟು, ಪ್ರಧಾನ ಸಂಚಾಲಕರೂ, ಕ್ಷೇತ್ರದ ಅಧ್ಯಕ್ಷರಾದ ನವೀನ್ ರಾಜ್ ಕೆ.ಜೆ, ಸಂಘಟನಾ ಕಾರ್ಯದರ್ಶಿ ಹರೀಶ್ ಶೆಟ್ಟಿ ಮಾಡ, ಕ್ಷೇತ್ರದ ಗುರುಸ್ವಾಮಿ ಉದಯ ಪಾವಳ, ಪ್ರಧಾನ ಅರ್ಚಕರಾದ ತಿರುಮಲೇಶ್ ಆಚಾರ್ಯ ಹೊಸಂಗಡಿ, ವಿಗ್ರಹ ಸೇವಾ ಕರ್ತೃ ಕಿರಣ್ ಶೆಟ್ಟಿ ಉದ್ಯಾವರ ಮಾಡ ದಂಪತಿಗಳು, ಸಮಿತಿ ಪದಾಧಿಕಾರಿಗಳಾದ: ದಿನಕರ ಬಿ.ಎಂ, ಕೃಷ್ಣ ಜಿ. ಮಂಜೇಶ್ವರ, ನವೀನ್ ಕೌಡೂರು, ಪದ್ಮನಾಭ ಬಾಡೂರು, ರಮೇಶ್ ಹೊಸಂಗಡಿ, ಭಾಸ್ಕರ ಹೊಸಂಗಡಿ, ಭಾಸ್ಕರ ಅಂಗಡಿಪದವು, ಶಿವಪ್ರಸಾದ್ ಪೆಲಪ್ಪಾಡಿ, ಚಂದ್ರಹಾಸ ಪೆಲಪ್ಪಾಡಿ, ನರೇಂದ್ರ ಹೆಗ್ಡೆ, ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ದೇವರಾಜ್ ಎಂ.ಎಸ್, ಕೋಶಾಧಿಕಾರಿ ಸುನಿಲ್ ಕುಮಾರ್ ಗಾಣಿಗ ಮೊದಲಾದವರು ಪಾಲ್ಗೊಂಡರು. ವಿಗ್ರಹ ರಚಣೆಯನ್ನು ಶಿಲ್ಪಿ ಮಹೇಶ್ ಆಚಾರ್ಯ ಬಾಯಾರು ನಿರ್ಮಿಸುತ್ತಿದ್ದು, ಈ ಬಾರಿಯ ವಿಗ್ರಹ ಸೇವೆಯನ್ನು ಧಾರ್ಮಿಕ, ಸಾಮಾಜಿಕ, ಮುಂದಾಳು, ಕೊಡುಗೈದಾನಿ ಕಿರಣ್ ಶೆಟ್ಟಿ ಉದ್ಯಾವರ ಮಾಡ ಮನೆಯವರು ಸಮರ್ಪಿಸುವರು.ಈ ಬಾರಿಯ ಮಂಜೇಶ್ವರ ಶ್ರೀ ಗಣೇಶೋತ್ಸವವು ಆಗಸ್ಟ್ 27 ರಿಂದ ಮೊದಲ್ಗೊಂಡು 30 ರ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಬಹಳ ವಿಜೃಂಭಣೆಯಿಂದ ಜರಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.