ಕೆ. ಜಯರಾಜ ಶೆಟ್ಟಿ ಚಾರ್ಲರವರ ಸಾರ್ಥಕ ಸಮಾಜ ಸೇವೆಗಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ.
ಮಂಜೇಶ್ವರ: ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಇಂದು ನಡೆದ ಕೇರಳ ಕರ್ನಾಟಕ ಕನ್ನಡ ರಾಜ್ಯೋತ್ಸವ 2025, ಕಾಸರಗೋಡು ಕನ್ನಡ ಗ್ರಾಮೋತ್ಸವ 2025 ಕಾರ್ಯಕ್ರಮದಲ್ಲಿ ಸಮಾಜ ಸೇವೆಗಾಗಿ ಶ್ರೀ K. ಜಯರಾಜ ಶೆಟ್ಟಿ ಚಾರ್ಲ ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜಯ ರಾಜ್ ಕೂಳೂರುರವರು ಕಾಸರಗೋಡು ಜಿಲ್ಲೆ ಸೇರಿದಂತೆ ಮಂಜೇಶ್ವರ ತಾಲೂಕಿನಾದ್ಯಂತ ಯುವ ನಾಯಕನಾಗಿ, ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡು, ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ. ಗಡಿ ಪ್ರದೇಶಗಳಲ್ಲಿ ತನ್ನದೇ ವಿಶಿಷ್ಟತೆಯಲ್ಲಿ ವೈಶಿಷ್ಟ್ಯ ಪೂರ್ಣವಾಗಿ ದೀನ ದಲಿತರ ಸೇವೆಗಾಗಿ, ಅಸಹಾಯಕ ಕುಟುಂಬಗಳ ಕಲ್ಯಾಣಕ್ಕೆ ಸಂಪೂರ್ಣ ತೊಡಗಿಸಿ, ವಿವಿಧ ಸಂಘ ಸಂಸ್ಥೆಗಳ ಮುಖಾಂತರ ಸಮಾಜಮುಖಿ ಸೇವಾ ಕಾರ್ಯ ಮಾಡುವುದರಲ್ಲಿ ನಿಸ್ಸಿಮಾರಾಗಿರುವರು. ಇವರ ಸೇವಾ ಕಾರ್ಯವನ್ನು ಮನಗಂಡು ಇಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರಕಿದೆ.
