Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಕುಳೂರು ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ.

ಕುಳೂರು ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ.

ಮಂಜೇಶ್ವರ: ಕುಳೂರಿನ‌ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯಲ್ಲಿ ಮಕ್ಕಳ‌ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಆ ಪ್ರಯುಕ್ತ ಶಾಲಾ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು. ತೀರ್ಪುಗಾರರಾಗಿ ನಿವೃತ್ತ ಮುಖ್ಯ ಶಿಕ್ಷಕರಾದ ಭಾಸ್ಕರ ಶೆಟ್ಟಿಗಾರ್, ನಿವೃತ್ತ ಶಿಕ್ಷಕರಾದ ವಿಜಯ ಕುಮಾರ್ ಮತ್ತು ನಾಗರಾಜ್ ರವರು ಸಹಕರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ನಿವೃತ್ತ ಮುಖ್ಯ ಶಿಕ್ಷಕರಾದ ಸತ್ಯನಾರಾಯಣ ಶರ್ಮರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಹಾಜಿ‌ ಕಂಚಿಲ‌ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಮಾಲತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರಾದ ಚಂದ್ರಹಾಸ ಶೆಟ್ಟಿ ಕುಳೂರು ಕನ್ಯಾನ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಬಾಲಕೃಷ್ಣ ಶೆಟ್ಟಿ ಪೊಯ್ಯೇಲು, ಶಾಲೆಯ ಹೆಮ್ಮೆಯ ಹಳೆ ವಿದ್ಯಾರ್ಥಿ ಜನಾರ್ಧನ ಪೂಜಾರಿ ಕುಳೂರು, ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಯರಾಜ್ ಸಿ ‌ಶೆಟ್ಟಿ ಚಾರ್ಲ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆಯಾದ ಕವಿತಾ ದೇರಂಬಳ, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆಯಾದ ಪ್ರಿಯಾಂಕ  ಕೇಮಜಲ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಶಾಲೆಗೆ ಹಲವಾರು ಕೊಡುಗೈ ದಾನಿಗಳ‌ ಮೂಲಕ ಶಾಲೆಯ ಅಭಿವೃದ್ಧಿ ಕಾರ್ಯಗಳನ್ನು ನೆರವೇರಿಸಲು ಸಹಕರಿಸಿದ ಶಾಲಾ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಯರಾಜ್ ಸಿ ಶೆಟ್ಟಿ ಚಾರ್ಲರವರನ್ನು ಶಾಲಾ ಶಿಕ್ಷಕ ವೃಂದದ ಪರವಾಗಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮಕ್ಕಳ‌ ದಿನಾಚರಣೆ ಪ್ರಯುಕ್ತ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾಗೂ ಉಪಜಿಲ್ಲಾ ಮಟ್ಟದ ಶಾಲಾ‌ ಕಲೋತ್ಸವ ಮತ್ತು ಶಾಸ್ತ್ರೋತ್ಸವದ ಪ್ರತಿಭೆಗಳಿಗೆ ಬಹುಮಾನ ವಿತರಣೆ ಮತ್ತು ಅಭಿನಂದನಾ ಕಾರ್ಯಕ್ರಮ ನಡೆಯಿತು. ಇದನ್ನು ಶಾಲಾ ಶಿಕ್ಷಕಿಯರಾದ ಶ್ವೇತ ಇ ಮತ್ತು ಅಶ್ವಿನಿ ಎಂ. ನಡೆಸಿಕೊಟ್ಟರು. ಹಳೆ ವಿದ್ಯಾರ್ಥಿ ಸಂಘದ ಜತೆ ಕಾರ್ಯದರ್ಶಿಯಾದ ವಸಂತ ಪೂಜಾರಿ ಕುಳೂರು ಸ್ವಾಗತಿಸಿ, ಶಿಕ್ಷಕಿ ನಯನ‌ ಎಂ. ವಂದಿಸಿದರು. ಶಿಕ್ಷಕಿ ಸೌಮ್ಯ ಪಿ. ಕಾರ್ಯಕ್ರಮ‌ ನಿರೂಪಿಸಿದರು.
ಬಳಿಕ ಶಾಲಾ‌ ಮಾತೃ ರಕ್ಷಕ - ಶಿಕ್ಷಕ ಸಂಘದ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿಗಳಿಂದ 'ದಾಯೆ ಇಂಚಾಂಡ್?' ಎಂಬ ತುಳು ಕಿರು ನಾಟಕ ಪ್ರದರ್ಶನ ನಡೆಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಾಲಾ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.