(11) ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದು, ನಿನ್ನೆ ಸಂಜೆ ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಸಂಭವಿಸಿದೆ. ಮೃತಪಟ್ಟ ಮೊಹಮ್ಮದ್ ಫಾಸಿಲ್ ಮೀಯಪದವು ವಿದ್ಯಾವರ್ಧಕ ಶಾಲೆಯಲ್ಲಿ 6 ನೆ ತರಗತಿಯ ವಿದ್ಯಾರ್ಥಿಯಾಗಿದ್ದು, ಕಳೆದ ಮೂರು ತಿಂಗಳಿನಿಂದ ಅಸೌಖ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರೆಂದು ತಿಳಿದು ಬಂದಿದೆ. ಅಸೌಖ್ಯ ಉಲ್ಭಣಗೊಂಡ ಹಿನ್ನಲೆಯಲ್ಲಿ ಕಳೆದ 10 ದಿನಗಳ ಹಿಂದೆ ತಿರುವನಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೃತದೇಹವನ್ನು ಇದೀಗ ಮನೆಗೆ ತರಲಾಗುತ್ತಿದ್ದು, ಬಳಿಕ ಮಜಿಬೈಲ್ ಜುಮ್ಮಾ ಮಸೀದಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.
8:10:45
