Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಮಂಜೇಶ್ವರದಲ್ಲಿ ಎನ್‌ಡಿಎ ಶಕ್ತಿಪ್ರದರ್ಶನ: ಕೆ. ಸುರೇಂದ್ರನ್ ನಾಮಪತ್ರ ಸಲ್ಲಿಕೆ

ಮಂಜೇಶ್ವರದಲ್ಲಿ ಎನ್‌ಡಿಎ ಶಕ್ತಿಪ್ರದರ್ಶನ: ಕೆ. ಸುರೇಂದ್ರನ್ ನಾಮಪತ್ರ ಸಲ್ಲಿಕೆ

ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಕೆ. ಸುರೇಂದ್ರನ್ ಅವರು ಇಂದು ನಾಮಪತ್ರ ಸಲ್ಲಿಸಿದರು. 
ಕೆ. ಸುರೇಂದ್ರನ್ ಅವರು ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಬಳಿಕ ಉಪ್ಪಳ ತಾಲೂಕು ಕಚೇರಿಯಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು. ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.
ಕಾಸರಗೋಡು ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಂ. ಎಲ್. ಅಶ್ವಿನಿ ಅವರು ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಅಭ್ಯರ್ಥಿಗಳು ಮತದಾರರ ಸಂಪರ್ಕಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಪ್ರಚಾರ ಚಟುವಟಿಕೆಗಳನ್ನು ವೇಗಗೊಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.