Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ನಯಾಬಜಾರ್ ನಲ್ಲಿರುವ ಲಯನ್ಸ್ ಸೇವಾ ಮಂದಿರದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಶಿಬಿರ ನಾಳೆ 28 ರಂದು.

ನಯಾಬಜಾರ್ ನಲ್ಲಿರುವ ಲಯನ್ಸ್ ಸೇವಾ ಮಂದಿರದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಶಿಬಿರ ನಾಳೆ 28 ರಂದು.
ಉಪ್ಪಳ: ಲಯನ್ಸ್ ಕ್ಲಬ್ ಮಂಜೇಶ್ವರ, ಉಪ್ಪಳ ಶ್ರೀ ಧರ್ಮಚಕ್ರ ಟ್ರಸ್ಟ್ ಶ್ರೀ ಭಾರತೀ ನೇತ್ರ ಚಿಕಿತ್ಸಾಲಯ ಮುಜುಂಗಾವು, ಕಾಸರಗೋಡು ಜಿಲ್ಲಾ ಅಂಧತ್ವ ನಿವಾರಣಾ ಸಮಿತಿ ಇವರ ಆಶ್ರಯದಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಶಿಬಿರ ನಾಳೆ 28 ರಂದು ಬೆಳಿಗ್ಗೆ 10ರಿಂದ 12.30ರ ತನಕ ಉಪ್ಪಳ ನಯಾಬಜಾರ್ ನಲ್ಲಿರುವ ಲಯನ್ಸ್ ಸೇವಾ ಮಂದಿರದಲ್ಲಿ ಜರಗಲಿದೆ. ಇದರ ಉದ್ಘಾಟನಾ ಸಮಾರಂಭ ದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಕಮಲಾಕ್ಷ ಕೆ. ಪಂಜ ಅಧ್ಯಕ್ಷತೆ ವಹಿಸುವರು. ಐಲ ಕ್ಷೇತ್ರದ ಆಡಳಿತ ಮೋಕ್ತೇಸರ ಕೋಡಿಬೈಲು ನಾರಾಯಣ ಹೆಗ್ಡೆ ಉದ್ಘಾಟಿಸುವರು. ಶ್ರೀ ಭಾರತೀ ನೇತ್ರ ಚಿಕಿತ್ಸಾಲಯದ ಆಡಳಿತಾಧಿಕಾರಿ ಡಾ.ಯಂ ಶ್ರೀಧರ ಭಟ್ ಪ್ರಾಸ್ತಾವಿಕ ಭಾಷಣ ಮಾಡುವರು. ಲಯನ್ಸ್ ಕ್ಲಬ್ ನ ಮೇಲಾಧಿಕಾರಿಗಳಾದ ರವಿ ಗುಪ್ತ, ನಾಸರ್ ಕೊಲವಯಲ್, ಲಕ್ಷ್ಮಣ್ ಕುಂಬಳೆ, ಚರಣ್ ಬಂದ್ಯೋಡು, ಮಾಧವ.ಕೆ, ನೇತ್ರ ತಜ್ಞ ಆನಂದ.ಎಚ್ ಮೊದಲಾದವರು ಉಪಸ್ಥಿತರಿರುವರು. ಸಾರ್ವಜನಿಕರು ಇದರ ಪ್ರಯೋಜನೆಯನ್ನು ಪಡೇದುಕೊಳ್ಳಬೇಕಾಗಿ ವಿನಂತಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.